ಭಟ್ಕಳ: ನಗರದಲ್ಲಿ ರವಿವಾರ ನಡೆಯಲಿರುವ ನಗರ ಹಿಂದೂ ಸಮಾಜೋತ್ಸವ  (hindu Samajotsava) ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸರು ಭಾರೀ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದಾರೆ. ನಗರದ ಮುಖ್ಯರಸ್ತೆ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಪರೇಡ್ (Police parade) ನಡೆಸಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮ್ಮೇಳನದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದಲೂ ಹೆಚ್ಚುವರಿ ಪಡೆಗಳನ್ನು ಕರೆಯಿಸಲಾಗಿದೆ.

bike rally/ ‘ನಗರ ಹಿಂದೂ ಸಂಗಮ’ ಅಂಗವಾಗಿ ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಬೈಕ್ ರ್ಯಾಲಿ

ಪೊಲೀಸ್ ಪರೇಡ್ (Police parade) ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಕೃಷ್ಣಮೂರ್ತಿ, ಡಿವೈಎಸ್ಪಿ ಗಿರೀಶ, ಸಿಪಿಐ ದಿವಾಕರ ಪಿ ಎಂ, ಗ್ರಾಮೀಣ ಠಾಣೆ ಪಿಐ ವೆಂಕಟೇಶ ಎಸ್ ಮುರ್ನಾಲ ಹಾಗೂ ನಗರ ಠಾಣೆ ಪಿಎಸ್ಐ ನವೀನ ಎಸ್ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

arrested/ ಹೆದ್ದಾರಿಯಲ್ಲಿ ದರೋಡೆ ಸಂಚು: ಹುರುಳಿಸಾಲ ಯುವಕನ ಬಂಧನ