ಭಟ್ಕಳ: ಮುರುಡೇಶ್ವರ (Murudeshwar) ಸಮೀಪದ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಮಕ್ಕಿ–ಎಡಬಡ್ರು ರಸ್ತೆ ಬದಿಯ ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಕಸ ಹಾಗೂ ಕೋಳಿ ತ್ಯಾಜ್ಯ ವಿಲೇವಾರಿ (Poultry Waste Disposal) ನಡೆಯುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಬಾರಿ ಮಾಧ್ಯಮಗಳು ವರದಿ ಮಾಡಿದ್ದರೂ ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಹಗಲು ಹೊತ್ತಲ್ಲೇ ಕೋಳಿ ತ್ಯಾಜ್ಯ ತುಂಬಿದ ವಾಹನವನ್ನು ಅರಣ್ಯ ಇಲಾಖೆಯ ಜಾಗದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ ವೇಳೆ ಗ್ರಾಮಸ್ಥರು ವಾಹನವನ್ನು ತಡೆದು, ಸಂಬಂಧಪಟ್ಟವರನ್ನು ಅರಣ್ಯ ಇಲಾಖೆ ಹಾಗೂ ಬೈಲೂರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಒಪ್ಪಿಸಿದರು. ಬಳಿಕ ಗ್ರಾಮ ಪಂಚಾಯಿತಿ ತಪ್ಪಿತಸ್ಥರಿಗೆ ದಂಡ ವಿಧಿಸಿ ವಸೂಲಿ ಮಾಡಿತು.
grant allocation/ ಅನುದಾನ ಹಂಚಿಕೆಯಲ್ಲಿ ಸಂಸದ ಕಾಗೇರಿ ನಿರಾಸಕ್ತಿ
ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಜಾನುವಾರುಗಳು ಸಂಚರಿಸುವ ಈ ಪ್ರದೇಶದಲ್ಲಿ ಕಸ ಮತ್ತು ಕೋಳಿ ತ್ಯಾಜ್ಯ ಸುರಿಯುವುದರಿಂದ (Poultry Waste Disposal) ದುರ್ವಾಸನೆ ಹರಡಿ ಪರಿಸರ ಮಾಲಿನ್ಯದ ಜೊತೆಗೆ ಆರೋಗ್ಯ ಸಮಸ್ಯೆಗಳೂ ಉಂಟಾಗುತ್ತಿವೆ. ಗ್ರಾಮಸ್ಥರು ಅನೇಕ ಬಾರಿ ಸ್ವಯಂಪ್ರೇರಿತರಾಗಿ ಕಸ ತೆರವುಗೊಳಿಸಿ ಸ್ವಚ್ಛತೆ ಕಾಪಾಡಿದರೂ, ಕಸ ಸುರಿಯುವವರ ಕೃತ್ಯ ಮಾತ್ರ ಮುಂದುವರಿದಿದೆ. ಕೇವಲ ದಂಡ ವಿಧಿಸಿ ಬಿಡುವುದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ ಎಂದು ಆರೋಪಿಸಿದ್ದಾರೆ.
grant allocation/ ಭಟ್ಕಳಕ್ಕೆ ಕೊಟ್ಟ ಅನುದಾನ ಕೇಳಿದ್ರೆ ದಂಗಾಗ್ತೀರ!
ಈ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ವಿದ್ಯುತ್ ಕಂಬ ಹಾಗೂ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರ ಪರಿಣಾಮವಾಗಿ ರಾತ್ರಿ ವೇಳೆಯಲ್ಲಿ ಹಾಗೂ ಜನರ ಸಂಚಾರ ಕಡಿಮೆ ಇರುವ ಸಮಯದಲ್ಲಿ ಅಕ್ರಮ ಕಸ ವಿಲೇವಾರಿ ನಿರಂತರವಾಗಿ ನಡೆಯುತ್ತಿದೆ. ಅಕ್ರಮ ಕಸ ವಿಲೇವಾರಿಗೆ ಶಾಶ್ವತ ಕಡಿವಾಣ ಹಾಕಲು ತಕ್ಷಣ ಸಿಸಿಟಿವಿ ಕ್ಯಾಮೆರಾಗಳನ್ನು (CCTV camera) ಅಳವಡಿಸುವುದು, ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸುವುದು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗಳಿಗೆ ಆಗ್ರಹಿಸಿದ್ದಾರೆ.
Grant allocation/ ಸಂಸದ ಕಾಗೇರಿ ಅನುದಾನ ಹಂಚಿಕೆ ಮಾಡಿರುವ ಕಾಮಗಾರಿಗಳು ಯಾವುವು?


