ಭಟ್ಕಳ(Bhatkal): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRP) ಬಿ.ಸಿ ಟ್ರಸ್ಟ್ ಅಡಿಯ ಭಟ್ಕಳ ತಾಲೂಕಿನ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ತಾಲೂಕು ಮಟ್ಟದ ಸಮಾವೇಶವು (convention) ಇಲ್ಲಿನ ಆಸರಕೇರಿಯಲ್ಲಿರುವ ನಿಚ್ಛಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಸತೀಶ ಶೇಟ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸ್ಥಳೀಯ ಒಕ್ಕೂಟದ ಅಧ್ಯಕ್ಷೆ ಉಷಾ ಪೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸತ್ಯಸಾಯಿ ಸಮಿತಿಯ ಭಾಸ್ಕರ ನಾಯ್ಕ ಉಪಸ್ಥಿತರಿದ್ದರು. ಯೋಜನೆ ಸಮಾಜಮುಖಿ ಕಾರ್ಯದ ಬಗ್ಗೆ, ಸಮಾಜದ ಅಭಿವೃದ್ಧಿಗಾಗಿ ಯೋಜನೆಯ ಮೂಲಕ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ಅವರು ವಿವರಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ : ಕಾರವಾರದಲ್ಲಿ ಪುಣೆ ಉದ್ಯಮಿಯ ಭೀಕರ ಕೊಲೆ
ಮುಖ್ಯ ಅತಿಥಿಯಾಗಿ ಎಸ್.ಬಿ.ಐ. (SBI) ಡೆಪ್ಯುಟಿ ಮ್ಯಾನೇಜರ್ ಮಲ್ಲಿಕಾರ್ಜುನ ಮಾತನಾಡಿ, ಯೋಜನೆ ಮತ್ತು ಬ್ಯಾಂಕ್ ನಡುವಿನ ಒಪ್ಪಂದದ ಪ್ರಕಾರ ಯಾವ ರೀತಿ ಕೆಲಸ ಮಾಡುತ್ತಿದೆ, DP ಹೆಚ್ಚಳ ಯಾವ ರೀತಿ ಆಗುತ್ತದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ. ಮಾತನಾಡಿ, ಸ್ವ ಸಹಾಯ ಸಂಘಗಳ ಬಲವರ್ಧನೆ, ಶಿಸ್ತು ಬದ್ಧ ವ್ಯವಹಾರ, ಬಡ್ಡಿ ದರ, PRK ಬಗ್ಗೆ, ಮಾಸಿಕ ವರದಿ ಮರುಪಾವತಿ ಚೀಟಿ ಬಗ್ಗೆ, ಲಾಭಾಂಶ ಹಂಚಿಕೆ, ವಾರದ ಕಂತಿನ ಪ್ರಯೋಜನ, ಸಮುದಾಯ ಕಾರ್ಯಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಇದನ್ನೂ ಓದಿ : ನಾಳೆ ಭಟ್ಕಳದಲ್ಲಿ ದಸರಾ ಕ್ರೀಡಾಕೂಟ
ಯೋಜನಾಧಿಕಾರಿ ಗಣೇಶ ನಾಯ್ಕ ತಾಲೂಕಿನಲ್ಲಿ ಯೋಜನೆ ಮೂಲಕ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿರುವ ವಿವಿಧ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸಮಾವೇಶದಲ್ಲಿ (convention) ಯೋಜನೆಯು ಬೆಳೆದು ಬಂದ ಹಾದಿಯ ಕಿರು ಚಿತ್ರ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಶ್ರೀಧರ ನಾಯ್ಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೬೭ ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿ ಸದಸ್ಯರು, ಸೇವಾ ಪ್ರತಿನಿಧಿಗಳು, ಮೇಲ್ವಿಚಾರಕರ ಶ್ರೇಣಿಯ ಸಿಬ್ಬಂದಿ ಉಪಸ್ಥಿತರಿದ್ದರು.