ನವದೆಹಲಿ : ಶಿರೂರು ಗುಡ್ಡ ಅವಘಡದಲ್ಲಿ ಮರಣ ಹೊಂದಿರುವವರ ಕುಟುಂಬ ಸದಸ್ಯರ ಜೊತೆ ಶ್ರೀ‌ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ದೆಹಲಿಯಲ್ಲಿ ಕರಾವಳಿ ಸಂಸದರನ್ನು ಭೇಟಿ ಮಾಡಿ (Delhi visit) ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಉತ್ತರ ಕನ್ನಡ ಸಂಸದ, ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರನ್ನು ಶ್ರೀಗಳು ದೆಹಲಿಯಲ್ಲಿ ಭೇಟಿ (Delhi visit) ಮಾಡಿದ್ದಾರೆ. ಪ್ರತಿ ಕುಟುಂಬಕ್ಕೂ ಐಆರ್‌ಬಿ ಕಂಪನಿಯಿಂದ ಒಂದು ಕೋಟಿ ರೂಪಾಯಿ ಹಣ ಪರಿಹಾರ ಕೊಡಿಸಬೇಕು. ಕಂಪನಿಯಲ್ಲಿ ಪ್ರತಿ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ಕೊಡಿಸಬೇಕು ಮತ್ತು ಗಂಗಾವಳಿ ಹಾಗೂ ಶಿರೂರು ಗ್ರಾಮದಲ್ಲಿ ಸಂಪೂರ್ಣ ಮನೆ ನಾಶವಾದ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ೧೫ ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಐ.ಆರ್.ಬಿ. ಕಂಪನಿಯವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ. ಐಆರ್ ಬಿ ಕಂಪನಿ ನಡೆಸಿದ ಅವೈಜ್ಞಾನಿಕ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ಸಂಸದರಿಗೆ ಶ್ರೀಗಳು ನೀಡಿದರು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಕೂಡ ಸಂಸದರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.

ಇದನ್ನೂ ಓದಿ :  ಬೆಂಗಳೂರಿಗೆ ಹೊರಟಿದ್ದ ಬಸ್ಸಿಗೆ ಬೆಂಕಿ

ಇಂದು ಮತ್ತು ನಾಳೆ ಎನ್.ಎಚ್.ಎ.ಐ. ಚೇರ್ಮನ್ ಮತ್ತು ಸಂಬಂಧಪಟ್ಟ ಮಂತ್ರಿಗಳು, ರಾಜ್ಯ ಮಂತ್ರಿಗಳು ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳನ್ನು ಭೇಟಿ ಮಾಡಿ ಅವೈಜ್ಞಾನಿಕ ಕಾಮಗಾರಿಯ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಈ ಕಂಪನಿಯ ವಿರುದ್ಧ ಕುಟುಂಬದ ಸದಸ್ಯರು ಜೊತೆ ದೆಹಲಿಯ ಜಂತರ್ ಮಂತರ್ ನಲ್ಲಿ ಉಪವಾಸ ಕುಳಿತುಕೊಳ್ಳಲು ನಿರ್ಣಯಿಸಲಾಗಿದೆ.
– ಪ್ರಣವಾನಂದ ಸ್ವಾಮೀಜಿ, ಶ್ರೀ ನಾರಾಯಣ ಗುರು ಶಕ್ತಿ ಪೀಠ.