ಭಟ್ಕಳ: ಪ್ರಾಥಮಿಕ ಶಾಲಾ ಶಿಕ್ಷಕರ (primary teachers) ಸಂಘದಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
೨೦೧೭ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವುದು ಮತ್ತು
ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡುವ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ (primary teachers) ೨೦೧೬ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡುವ ವಿಷಯದ ಬಗ್ಗೆ ಮನವಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕೈ ಚೀಲದಲ್ಲೇ ಸುಟ್ಟು ಕರಕಲಾದ ಮಗನ ಅವಶೇಷ ಕೊಂಡೊಯ್ದು ತಂದೆ
ಸಂಘದ ಹಕ್ಕೋತ್ತಾಯಗಳು :
೧. ೨೦೧೭ ರವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, ೨೦೧೭ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ ೨೦೧೬ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು.
೨. ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: ೧-೭/೮ ಕ್ಕೆ ನೇಮಕ ಹೊಂದಿದವರನ್ನು PST ಎಂದು ಪದನಾಮ ಮಾಡಿ ೧-೫ ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.
೩. ಅರ್ಹ ವಿದ್ಯಾರ್ಹತೆ ಪೂರೈಸಿದ ೨೦೧೬ಕ್ಕಿಂತ ಮೊದಲು ಪೂರೈಸಿದ ೨೦೧೬ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ ೧ ರಿಂದ ೮ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು.
೪. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.
೫. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ ೨೦೧೬ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ (Carry Forwarding Seniority) ಯೊಂದಿಗೆ ಬಡ್ತಿ ನೀಡುವುದು.
ಇದನ್ನೂ ಓದಿ : ಬಿಜೆಪಿ ಮಹಿಳಾ ಮೋರ್ಚಾದಿಂದ ಕೈಮಗ್ಗ ದಿನಾಚರಣೆ
ಈ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಘದ ತಾಲೂಕಾಧ್ಯಕ್ಷ ಉಲ್ಲಾಸ ನಾಯ್ಕ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಮನವಿ ಸಲ್ಲಸಿದರು. ವೆಂಕಟೇಶ ನಾಯ್ಕ ಸೇರಿದಂತೆ ಸಂಘದ ಪದಾಧಿಕಾರಿಗಳು, ಶಿಕ್ಷಕರು ಇದ್ದರು.