ಭಟ್ಕಳ (Bhatkal): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (Government College) ಆಂತರಿಕ ಗುಣಮಟ್ಟದ ಭರವಸೆಯ ಕೋಶ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ ಆಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕಾರ್ಯಕ್ರಮ ಸಂಘಟನಾ ಕಾರ್ಯಗಾರವು (workshop) ಯಶಸ್ವಿಯಾಗಿ ಜರುಗಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮದಲ್ಲಿ ಸಂಘಟಕ, ನಿರೂಪಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಂಗಾಧರ ನಾಯ್ಕ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲೇಜು ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪಠ್ಯ ವಿಷಯದ ಜೊತೆಗೆ ಕಾರ್ಯಕ್ರಮ ನಿರೂಪಣೆ, ಸಂಘಟನೆ, ನಾಯಕತ್ವ ಗುಣ, ಸಂವಹನ ಕೌಶಲ್ಯ ಮುಂತಾದ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮವೊಂದರ ಯೋಜನೆ, ಆಮಂತ್ರಣ ಪತ್ರಿಕೆ ತಯಾರಿ, ಕಾರ್ಯಕ್ರಮ ಅನುಷ್ಠಾನ ಗೊಳಿಸುವ ಸಂದರ್ಭದಲ್ಲಿ ಗಮನಿಸಬೇಕಾದ ಅಂಶಗಳ ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
ಇದನ್ನೂ ಓದಿ : Arrested/ ಗರ್ಭಿಣಿ ಹಸು ಕೊಂದ ಭಟ್ಕಳದ ಇಬ್ಬರ ಬಂಧನ
ವರದಿಗಾರ ಈಶ್ವರ ನಾಯ್ಕ, ಟಿವಿ ವಾಹಿನಿಗಳಿಗೆ (TV Channels) ವರದಿ ಮಾಡುವಿಕೆ, ಫೋಟೋ ಮತ್ತು ವಿಡಿಯೋ ಮಾಡುವಾಗ ಗಮನಿಸಬೇಕಾದ ಅಂಶಗಳು ಹಾಗೂ ಯೂಟ್ಯೂಬ್ (Youtube) ಚಾನೆಲ್ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾoಶುಪಾಲ ನಾಗೇಶ ಶೆಟ್ಟಿ, ಪುಸ್ತಕದಾಚೆಗೆ ವಿದ್ಯಾರ್ಥಿಗಳು ಒಂದಿಷ್ಟು ಬೇರೆ ಬೇರೆ ಕೌಶಲ ಗಳಿಸಿಕೊಳ್ಳಲು ಇಂಥ ಕಾರ್ಯಕ್ರಮ (workshop) ಸಂಯೋಜಿಸಲಾಗಿದೆ ಎಂದರು.
ಇದನ್ನೂ ಓದಿ : Women’s Day/ ಸೋನಾರಕೇರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ
ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟದ ಭರವಸೆಯ ಕೊಶದ ಸಂಯೋಜಕರಾದ ಸಹಾಯಕ ಪ್ರಾಧ್ಯಾಪಕ ಸುರೇಶ ಮೆಟಗಾರ, ನೇತ್ರಾವತಿ ನಾಯ್ಕ, ಚಂದ್ರಾವತಿ ಮೊಗೇರ, ಹರೀಶ್ ಜೋಗಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ವಿಜೇತಾ ನಿರೂಪಿಸಿದರೆ, ವೀಣಾ ಸ್ವಾಗತಿಸಿದರು. ದಿವ್ಯಾ ವಂದಿಸಿದರು.
ಇದನ್ನೂ ಓದಿ : Car-auto accident/ ಕಾರು-ಆಟೋ ಜಖಂ; ಮೂವರಿಗೆ ಗಾಯ



