ಭಟ್ಕಳ: ಕೇಂದ್ರ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ (H D Kumaraswamy) ಅವರ ಆಪ್ತ ಕಾರ್ಯದರ್ಶಿಯಾದ ಐಎಎಸ್ ಅಧಿಕಾರಿ (IAS officer) ತೇಜಸ್ವಿ ನಾಯ್ಕ ಅವರನ್ನು ಕೇಂದ್ರ ಕಾರ್ಮಿಕ ಮತ್ತು ಸಬಲೀಕರಣ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ (promoted) ನೀಡಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ (Siddapur) ಮೂಲದ ಹಾಲಿ ಶಿರಸಿ (Sirsi) ನಿವಾಸಿಯಾದ ಇವರು ೨೦೦೯ ಕೆಡರ್ ನ ಮಧ್ಯಪ್ರದೇಶದ (Madhya Pradesh) ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಮದ್ಯಪ್ರದೇಶದಲ್ಲಿ ದಕ್ಷ ಹಾಗೂ ಖಡಕ್ ಐಎಎಸ್ ಅಧಿಕಾರಿಯೆಂದೇ ಪ್ರಸಿದ್ಧರಾಗಿದ್ದರು. ಮಧ್ಯಪ್ರದೇಶದಲ್ಲಿ ಇವರು ಪರಿಣಾಮಕಾರಿಯಾಗಿ ಜಾರಿಗೆ ತಂದಂತಹ ಜಲಮಿಷನ್ ಯೋಜನೆಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆತಿರುವುದು ಇವರ ಕಾರ್ಯಶೈಲಿಗೆ ಹಿಡಿದ ಕೈಗನ್ನಡಿಯಾಗಿದೆ. ಈ ಹಿಂದೆ ಕೇಂದ್ರ ಕೃಷಿ ಸಚಿವ ಅರ್ಜುನ ಮುಂಡಾ ಅವರ ಆಪ್ತ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.
national award/ ವಿದ್ಯಾಂಜಲಿ ಪಬ್ಲಿಕ್ ಶಾಲೆಗೆ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಗೌರವ
ಇವರ ಅನುಭವವನ್ನು ಪರಿಗಣಿಸಿ ಕೇಂದ್ರ ಸರ್ಕಾರ ಇವರಿಗೆ ಈ ದೊಡ್ಡ ಹುದ್ದೆಯನ್ನು ನೀಡಿ ಪದೋನ್ನತಿ ನೀಡಿದೆ (promoted). ಇವರ ಪತ್ನಿ ಸ್ವಾತಿಮೀನಾ ನಾಯ್ಕ ಕೂಡ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.



