ಶಿವಮೊಗ್ಗ (Shivamogga) : ಶಿರೂರು ಭೂಕುಸಿತ (landslide), ಇತರೆ ಪ್ರಕರಣದಿಂದ ಕಸ್ತೂರಿ ರಂಗನ್ ವರದಿ (Kasturi Rangan Report) ಜಾರಿ ಮಾಡಲು ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ ಕೆಲವು ತಿದ್ದುಪಡಿಗಳೊಂದಿಗೆ ವರದಿ ಜಾರಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆ (proposal for central) ಸಲ್ಲಿಸಲಾಗುವುದು ಎಂದು ಶಿಕ್ಷಣ ಸಚಿವ (Education Minister) ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ (kasturi Rangan report) ಅನುಷ್ಠಾನ ಮಾಡಿದಲ್ಲಿ ಮಲೆನಾಡು (malnad) ಜನ ಬದುಕುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕೇರಳದಲ್ಲಿ‌ (Kerala) ಮಾಡಿದಂತೆ ಕೆಲವು, ತಿದ್ದುಪಡಿ, ಬದಲಾವಣೆ ಮಾಡಿಕೊಂಡು ಜಾರಿಗೆ ತಂದರೆ ಒಳಿತು. ಜನರಿಗೂ ಅನುಕೂಲ ಆಗಬೇಕು, ಕಸ್ತೂರಿ ರಂಗನ್ ವರದಿಯೂ ಜಾರಿಯಾಗಬೇಕು ಆ ರೀತಿಯಲ್ಲಿ ತಿದ್ದುಪಡಿ, ಬದಲಾವಣೆ ಮಾಡಿ ಕೇಂದ್ರಕ್ಕೆ  ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ : ಭಟ್ಕಳ ತಹಶೀಲ್ದಾರ, ಜಾಲಿ ಪಪಂ ಮುಖ್ಯಾಧಿಕಾರಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಪಕ್ಷಾತೀತವಾಗಿ ಎಲ್ಲರನ್ನೂ ಕರೆದು, ಅಭಿಪ್ರಾಯ ಸಂಗ್ರಹಿಸಲಾಗುವುದು. ರಾಜಕಾರಣದಿಂದ ಹೊರತುಪಡಿಸಿ ಈ ವಿಷಯವನ್ನು‌ ನೋಡಿ‌ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ.  ಜೀವನೋಪಾಯ ಕಲ್ಪಿಸದಿದ್ದರೆ ಜನ ಏನು‌ ಮಾಡುತ್ತಾರೆ. ಜನರಿಗೆ ಅನುಕೂಲ ಆಗಬೇಕು, ಪರಿಸರಕ್ಕೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಕೆಲವು ತಿದ್ದುಪಡಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪರಿಸರ (environment) ಉಳಿದಿದ್ದರೆ ಅದು ರೈತರಿಂದ ಎಂದು ಮರೆಯಬಾರದು. ಅವರಿಗೂ ಬದಕಲು ಅನುಕೂಲ ಆಗಬೇಕು ಎಂದು ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ : ಕಾರು ಡಿಕ್ಕಿಯಾಗಿ ಸ್ಕೂಟರ್‌ ಮೇಲಿದ್ದ ನಾಲ್ವರಿಗೆ ಗಾಯ