ಭಟ್ಕಳ (Bhatkal) : ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ (waqf act) ತಿದ್ದುಪಡಿಯ ಮಸೂದೆಯನ್ನು (amendment) ಹಿಂಪಡೆಯಬೇಕು ಎಂದು ಆಗ್ರಹಿಸಿ ಶನಿವಾರ ಭಟ್ಕಳ ಎಸ್‌ಡಿಪಿಐ (SDPI) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಯಿಸಿ, ಸಹಾಯಕ ಆಯುಕ್ತರ ಮೂಲಕ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ವಕ್ಸ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಸ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇದ್ರ ಮೋದಿ (Narendra Modi) ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ್ ಬಿಲ್-೨೦೨೪ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಮುಸ್ಲಿಂ (Muslim) ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡವಾಗಿದೆ. ಹಾಲಿಯಿರುವ ವಕ್ಫ್ ಕಾಯ್ದೆಗೆ (waqf act) ಸರಿಸುಮಾರು ೪೦ ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ್ ಕಾಯ್ದೆಯನ್ನೇ ನಾಶಗೊಳಿಸಲು ಈ ವಕ್ಫ್ ಬಿಲ್ ೨೦೨೪ ತಂದಿರುವುದು. ಇದು ಜಾತ್ಯತೀತ ಮೌಲ್ಯಗಳ ವಿರುದ್ಧವಾಗಿದೆ ಹಾಗೂ ತಾರತಾಮ್ಯಗಳೊಂದಿಗೆ ಕೂಡಿದೆ. ಅದುದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಈ ಬಿಲ್ ವಿರುದ್ಧ ತನ್ನ ವಿರೋಧ ವ್ಯಕ್ತಪಡಿಸುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ವಿಡಿಯೋ ಸಹಿತ ಇದನ್ನೂ ಓದಿ : Gurukripa/ ಗುರುಕೃಪಾ ಸೊಸೈಟಿಗೆ ೫೦ ಲಕ್ಷ ರೂ. ಲಾಭ
ಇದಕ್ಕೂ ಪೂರ್ವದಲ್ಲಿ ಭಟ್ಕಳ ಪ್ರವಾಸಿ ಮಂದಿರ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಅಲ್ಲಿಂದ ಮೆರವಣಿಗೆ ಹೊರಟು ತಾಲೂಕಾ ಆಡಳಿತ ಸೌಧದಲ್ಲಿ ಮುಕ್ತಾಯಗೊಂಡಿತು. ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ಕಂದಾಯ ನಿರೀಕ್ಷಕ ವಿಶ್ವನಾಥ ಗಾವಂಕರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ. ಉತ್ತರ ಕನ್ನಡ (uttara kannada) ಜಿಲ್ಲಾಧ್ಯಕ್ಷ ತಪಿಕ್ ಬ್ಯಾರಿ, ಜಿಲ್ಲಾ ಕಾರ್ಯದರ್ಶಿ ಜೈನ್, ಭಟ್ಕಳ ತಾಲೂಕಾ ಅಧ್ಯಕ್ಷ ಮಕ್ಬೂಲ್ ಶೇಖ್ , ತಾಲೂಕು ಉಪಾಧ್ಯಕ್ಷ ವಸೀಂ ಮಣೆಗಾರ್, ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ