ಭಟ್ಕಳ (Bhatkal): ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು  (All India Muslim Personal Law Board) ವಕ್ಫ್ ತಿದ್ದುಪಡಿ ಮಸೂದೆಯ (amendment in Waqf Bill) ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆಯಲ್ಲಿ, ಭಟ್ಕಳದ ಮಜ್ಲಿಸ್-ಎ-ಇಸ್ಲಾ ವ ತಂಝೀಮ್ (Tanzeem) ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ (Protest) ನಡೆಸಿದರು.
ದೇಶಾದ್ಯಂತ ಮುಸ್ಲಿಮರು ವಿರೋಧದ ಸಂಕೇತವಾಗಿ ಕಪ್ಪು ಪಟ್ಟಿ ಧರಿಸುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸೂಚಿಸಿತ್ತು. ಭಟ್ಕಳದಲ್ಲಿ  ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆಯನ್ನು (amendment in Waqf Bill) ವಿರೋಧಿಸಲು ಕಪ್ಪು ಪಟ್ಟಿ ಧರಿಸಿ, ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ತಂಝೀಮ್ ಅಧ್ಯಕ್ಷ ಇನಾಯತ್ ಉಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂಜೆ ನದ್ವಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯನಿರ್ವಾಹಕ ಸದಸ್ಯ ಅತಿಕುರ್ ರೆಹಮಾನ್ ಮುನಿರಿ ಮತ್ತು ಇತರರು ಪ್ರತಿಭಟನೆಯಲ್ಲಿ ಇದ್ದರು.