ಭಟ್ಕಳ (Bhatkal) : ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆಯನ್ನು ಖಂಡಿಸಿ ಹಾಗೂ ಪೊಲೀಸ್ ಚೆಕ್‌ಪೋಸ್ಟ್‌ಗಳಲ್ಲಿ ಅನುಮಾನಾಸ್ಪದ ವಾಹನಗಳ ಹೆಚ್ಚಿನ ತಪಾಸಣೆ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ (HJV) ನೇತೃತ್ವದಲ್ಲಿ ಭಟ್ಕಳದಲ್ಲಿ ಪ್ರತಿಭಟನೆ (Protest) ನಡೆದು, ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗೆ ಸೋಮವಾರದಂದು ಮನವಿ ಸಲ್ಲಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ ತಾಲೂಕು ಕೋಮು ಸೂಕ್ಷ್ಮ ಪ್ರದೇಶವಾಗಿರುವುದನ್ನು ಅರಿತು ಭದ್ರತೆಯ (security) ದೃಷ್ಟಿಯಿಂದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವಂತೆ ಭಟ್ಕಳ ಪ್ರವೇಶಿಸುವ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ಅಳವಡಿಸಲಾಗಿತ್ತು. ಅಕ್ರಮ ಗೋಸಾಗಾಟದಿಂದ ಹಿಡಿದು ಇನ್ನಿತರ ಎಲ್ಲಾ ರೀತಿಯ ವಾಹನ ತಪಾಸಣೆಗಾಗಿ ಅವಶ್ಯವಿರುವ ಸಿಬ್ಬಂದಿಯನ್ನು ಕರ್ತವ್ಯದಲ್ಲಿ ಇರಿಸಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಬದಲಾವಣೆಯಾದ ನಂತರದ ದಿನಗಳಿಂದ ಒಂದು ಕೋಮಿನವರ ತುಷ್ಟೀಕರಣಕ್ಕಾಗಿ ಅಕ್ರಮ ಗೋಸಾಗಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ ಆರೋಪಿಸಿದೆ.
ಇದನ್ನೂ ಓದಿ : case registered/ ಹಾಸಿಗೆಯಡಿಯಲ್ಲಿ ಇಟ್ಟಿದ್ದ ಚಿನ್ನಾಭರಣ ಕಳವು
ಕಾನೂನು ಬಾಹೀರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಭಟ್ಕಳ ಪ್ರವೇಶಿಸುವ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಅಳವಡಿಸಿರುವ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಇದರಿಂದ ಭಟ್ಕಳದಲ್ಲಿ ಅಕ್ರಮ ಗೋ ಸಾಗಾಟವು ಈಗಾಗಲೇ ನಡೆದಿದ್ದು, ಗೋ ಹತ್ಯೆ ಮಾಡಲು ಭಟ್ಕಳದ ಹಲವು ಭಾಗಗಳಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಗೋವುಗಳನ್ನು ಕೂಡಿಟ್ಟು ಗೋ ಹತ್ಯೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ತಿಳಿಸಿರುವ ಹಿಂಜಾವೇ ಅಲ್ಪಸಂಖ್ಯಾತರನ್ನು ಓಲೈಸಲು ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆಗೆ ಪರೋಕ್ಷವಾಗಿ ಸಹಕರಿಸುವ ಮೂಲಕ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತರಲಾಗುತ್ತಿದೆ ಎಂದು ತೀವ್ರವಾಗಿ ಖಂಡಿಸುತ್ತದೆ.
ಇದನ್ನೂ ಓದಿ : Fraud Case/ ಬೆಂಗಳೂರಲ್ಲಿ ವಂಚಿಸಿದ ಆರೋಪಿಗಳು ಅಂಕೋಲಾದಲ್ಲಿ ಸೆರೆ
ಈ ಕೂಡಲೇ ಎಲ್ಲಾ ಚೆಕ್ ಪೋಸ್ಟ್‌ಗಳನ್ನು ಕಾರ್ಯಪ್ರವೃತ್ತಗೊಳಿಸಿ ಸೂಕ್ತ ಸಿಬ್ಬಂದಿ ನೇಮಿಸಿ, ಅಕ್ರಮ ಗೋ ಸಾಗಾಟಕ್ಕೆ ಕಡಿವಾಣ ಹಾಕಬೇಕು. ಈಗಾಗಲೇ ಭಟ್ಕಳದ ಹಲವಾರು ಭಾಗಗಳಲ್ಲಿ ಗೋ ವಧೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಅಲ್ಲಲ್ಲಿ ಗೋವುಗಳನ್ನು ಶೇಖರಿಸಿರುವುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ತಾಲೂಕು ಆಡಳಿತವು ಸಹ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆಯನ್ನು ಸಂಪೂರ್ಣವಾಗಿ ಕಡಿವಾಣ ಹಾಕುವಲ್ಲಿ ಸಕಾರಾತ್ಮಕವಾಗಿ ತನ್ನ ಜವಾಬ್ದಾರಿ ನಿಭಾಯಿಸಬೇಕು. ಭಟ್ಕಳದಲ್ಲಿ ಹಲವು ಮನೆ ಮತ್ತು ಗೋದಾಮುಗಳಲ್ಲಿ ಅನಧಿಕೃತ ಹಾಗೂ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಗೋ ವಧೆ ಮಾಡುತ್ತಿರುವವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದನ್ನೂ ಓದಿ : Pralhad Joshi/ ಚಡ್ಡಿ ದೋಸ್ತರೊಂದಿಗೆ ಜೋಶಿ ಹರಟೆ, ಊಟ
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕ ಜಯಂತ ನಾಯ್ಕ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಾಮಕೃಷ್ಣ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ನಿಗಮ-ಮಂಡಳ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಕಾನೂನು ಸಲಹೆಗಾರ ರಾಜೇಶ ನಾಯ್ಕ ಮತ್ತಿತರರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ (Protest) ಸಹಸಂಚಾಲಕ ನಾಗೇಶ ನಾಯ್ಕ, ಕುಮಾರ ನಾಯ್ಕ, ರಾಘವೇಂದ್ರ ನಾಯ್ಕ ಮುಟ್ಟಳ್ಳಿ, ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ಶ್ರೀನಿವಾಸ ನಾಯ್ಕ ಹನುಮಾನನಗರ, ಬಿಜೆಪಿ ಜಿಲ್ಲಾ ಪ್ರಧಾನ ಕಾಯದರ್ಶಿ ಶ್ರೀಕಾಂತ ನಾಯ್ಕ, ಬಿಜೆಪಿ ಹಿಂದುಳಿದ ವರ್ಗದ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಹಿಂದುಳಿದ ವರ್ಗದ ರಾಜ್ಯ ಉಪಾದ್ಯಕ್ಷ ಈಶ್ವರ ನಾಯ್ಕ, ಹಿಂಜಾವೇ ಜಿಲ್ಲಾ ಸಹ ಸಂಚಾಲಕ ದಿನೇಶ ನಾಯ್ಕ ಮುಂತಾದವರು ಇದ್ದರು.
ಪ್ರತಿಭಟನೆಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ರೀಲ್ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : DK Shivkumar/ ಕಾಂಗ್ರೆಸ್ ಫ್ಲೆಕ್ಸ್ ಬ್ಯಾನರ್ ವಿರುದ್ಧ ಡಿಕೆಶಿ ಕಿಡಿ !