ಕಾರವಾರ (Karwar) : ಕರ್ತವ್ಯದಲ್ಲಿ ಅಶಿಸ್ತು, ದುರ್ನಡತೆ ಮತ್ತು ಬೇಜವಾಬ್ದಾರಿ ತೋರಿರುವ ಹಿನ್ನೆಲೆ ಮುರ್ಡೇಶ್ವರ (murdeshwar) ಠಾಣೆ ಪಿಎಸ್ಐ ಮಂಜುನಾಥ ಅಮಾನತುಗೊಂಡಿದ್ದಾರೆ (psi suspend).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪಿಎಸ್ಐ ಮಂಜುನಾಥ ಅವರನ್ನು ಪೊಲೀಸ್ ಅಧೀಕ್ಷಕ (police superintendent) ಎಂ.ನಾರಾಯಣ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ನಲ್ಲಿ ನಿನ್ನೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಳಿಸಲಾಗಿದೆ.
ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುಚಟಿಕೆಗಳನ್ನು ತಡೆಗಟ್ಟುವಲ್ಲಿ ವಿಫಲರಾಗಿ, ಕರ್ತವ್ಯದಲ್ಲಿ ಘೋರ ಅಶಿಸ್ತು ಮತ್ತು ದುರ್ನಡತೆ ಹಾಗೂ ಬೇಜವಾಬ್ದಾರಿತನ ತೋರಿರುವುದರಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ (PSI suspend) ಎಂದು ಎಸ್ಪಿ ಎಂ.ನಾರಾಯಣ ತಿಳಿಸಿದ್ದಾರೆ.

ಇದನ್ನೂ ಓದಿ :  ಮುರ್ಡೇಶ್ವರ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ; ಇಬ್ಬರ ಬಂಧನ

ಹಾಗೆಯೇ ಅಧೀನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡದೇ ಮತ್ತು ಮೇಲ್ವಿಚಾರಣೆ ನಡೆಸದೇ ಇರುವ ಭಟ್ಕಳ ಗ್ರಾಮೀಣ ವೃತ್ತದ ಪ್ರಭಾರ ಹೊಂದಿದ್ದ ಗ್ರಾಮೀಣ ಠಾಣೆ ಪೊಲೀಸ್ ನಿರೀಕ್ಷಕರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಎಸ್ಪಿ ಎಂ.ನಾರಾಯಣ ತಿಳಿಸಿದ್ದಾರೆ.

ಇದನ್ನೂ ಓದಿ :  ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರಕ್ಕೆ ಪ್ರಸ್ತಾವನೆ