ಭಟ್ಕಳ (Bhatkal): ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ (Rajyotsava) ಸಭಾ ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಲು ಹಿಂದೇಟು ಹಾಕುವ ಮೂಲಕ ಅಗೌರವ ತೋರಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ ತಾಲೂಕಾಡಳಿತ, ಭಟ್ಕಳ ತಾಲೂಕು ಪಂಚಾಯತ, ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ (Rajyotsava) ಕಾರ್ಯಕ್ರಮ ನಡೆಯಿತು. ಈ ವೇಳೆ ಸಹಾಯಕ ಆಯುಕ್ತರಿಂದ ಧ್ವಜಾರೋಹಣ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮ ಪೂರ್ವದಲ್ಲಿ ಕನ್ನಡ ಭುವನೇಶ್ವರಿ ದೇವಿಯ ಫೋಟೋಗೆ ವೇದಿಕೆ ಮೇಲಿದ್ದ ಗಣ್ಯರೆಲ್ಲರೂ ಪುಷ್ಪ ನಮನ ಸಲ್ಲಿಸಿದರು.
ಇದನ್ನೂ ಓದಿ : ೪೮ ಗಂಟೆಗಳಲ್ಲಿ ೮ ಆನೆಗಳ ಸಾವು
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ ಪುಷ್ಪ ನಮನ ಸಲ್ಲಿಸಲು ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆಗೆ ತಿಳಿಸಿದರು. ಈ ವೇಳೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿದರು. ನಂತರ ಮತ್ತೆ ಸಹಾಯಕ ಆಯುಕ್ತೆ ಡಾ.ನಯನ ಕೂಡ ಸೂಚಿಸಿದರು. ಇದಕ್ಕೂ ನಿರಾಕರಿಸಿ ಅಗೌರವ ಸಲ್ಲಿಸಿ, ಕನ್ನಡಿಗರ ಅಸಮಾಧಾನಕ್ಕೆ ಕಾರಣರಾಗಿದ್ದಾರೆ.
ಇದನ್ನೂ ಓದಿ : ತಹಶೀಲ್ದಾರ ವಿರುದ್ಧ ಆರ್ಟಿಐ ಕಾರ್ಯಕರ್ತರಿಗೆ ಗೆಲುವು
ಕರ್ನಾಟಕದಲ್ಲೇ ಹುಟ್ಟಿ, ಕರ್ನಾಟಕದ ಸೌಲಭ್ಯ ಪಡೆದು, ಕನ್ನಡಿಗರಿಂದಲೇ ಆಯ್ಕೆಯಾದ ಜನ ಪ್ರತಿನಿಧಿಗಳು ಈ ರೀತಿ ಅಗೌರವ ಸಲ್ಲಿಸಿದರೆ ಹೇಗೆ ಎಂದು ನೆರೆದಿದ್ದ ಕನ್ನಡಾಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.