ಭಟ್ಕಳ: ತಾಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ರಥೋತ್ಸವ (Rathotsava) ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ (Raghaveshwara Sri) ದಿವ್ಯ ಉಪಸ್ಥಿತಿಯಲ್ಲಿ ಮಂಗಳವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ರಥೋತ್ಸವದ (Rathotsava) ಧಾರ್ಮಿಕ ಕಾರ್ಯಕ್ರಮಗಳು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದೇವಸ್ಥಾನದ ತಾಂತ್ರಿಕ ವೇ ಮೂ ಅಮೃತೇಶ್ ಭಟ್ಟ ಗೋಕರ್ಣ (Gokarna) ಹಾಗೂ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ ಬಾಲಚಂದ್ರ ಭಟ್ಟ ನೇತೃತ್ವದಲ್ಲಿ ಜರುಗಿತು. ನೂರಾರು ಜನರು ರಥ ಕಾಣಿಕೆ ಸಲ್ಲಿಸಿದರು. ಮಂಗಳವಾರ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ಗಣೇಶ ಪೂಜೆ, ಪುಣ್ಯಾಹ, ರುದ್ರಹವನದ ಮಹಾಸಂಕಲ್ಪ, ಶ್ರೀದೇವರಿಗೆ ಕಲಾವೃದ್ಧಿ-ಯಾದಿ ಹವನ, ವೀರಭದ್ರ ದೇವರ ಪ್ರೀತ್ಯರ್ಥ ರುದ್ರವನದ ಪೂರ್ಣಾಹುತಿ ನಡೆಯಿತು.

ಇದನ್ನು ಓದಿ: Raghaveshwara Sri / ಮರಂಬಳ್ಳಿಗೆ ರಾಘವೇಶ್ವರ ಶ್ರೀ ಭೇಟಿ; ಯೋಗನರಸಿಂಹ ದೇವಸ್ಥಾನ ವೀಕ್ಷಣೆ 

ರಥೋತ್ಸವದಲ್ಲಿ ದೇವಸ್ಥಾನದ ಮೊಕ್ತೇಸರ ಉಮೇಶ್ ಹೆಗಡೆ, ದೇವಿಮನೆ ಆಡಳಿತ ಸಮಿತಿಯ ಅಧ್ಯಕ್ಷ ವಿನಾಯಕ ಭಟ್ಟ ಬೆಟ್ಕೂರು, ಉಪಾಧ್ಯಕ್ಷ ಪರಮೇಶ್ವರ ಭಟ್ಟ, ನಿಕಟಪೂರ್ವ ಅಧ್ಯಕ್ಷ ಶಿವಾನಂದ ಹೆಬ್ಬಾರ, ಭವತಾರಿಣಿ ವಲಯದ ಅಧ್ಯಕ್ಷ ವಿಘ್ನೇಶ್ವರ ಉಪಾಧ್ಯಾಯ, ಕಾರ್ಯದರ್ಶಿ ವಿನಾಯಕ ಭಟ್ಟ ತೆಕ್ನಗದ್ದೆ, ಪ್ರಮುಖರಾದ ಎಂ ಎಂ ಹೆಬ್ಬಾರ್, ನಾರಾಯಣ ಹೆಬ್ಬಾರ ಬೆಣಂದೂರು,ರಾಧಾಕೃಷ್ಣ ಬೆಂಗಳೂರು (Bengaluru), ರಾಜಶೇಖರ ಹೆಬ್ಬಾರ ಉಡುಪಿ. ಅನಂತ ಹೆಬ್ಬಾರ, ಗಣೇಶ ಹೆಬ್ಬಾರ, ಶ್ರೀನಿವಾಸ ಹೆಗಡೆ, ಅಶೋಕ ಭಟ್ಟ, ಗಣಪಯ್ಯ ಹೆಗಡೆ, ಶಿವಾನಂದ ಹೆಬ್ಬಾರ, ಎಂ ವಿ ಭಟ್ಟ ಮುಂತಾದವರು ಉಪಸ್ಥಿತರಿದ್ದರು.

ಇದನ್ನು ಓದಿ: Raghaveshwara Shree/ ಶ್ರೀ ಕ್ಷೇತ್ರ ದೇವಿಮನೆಗೆ ರಾಘವೇಶ್ವರ ಶ್ರೀ ಆಗಮನ

ಮಧ್ಯಾಹ್ನ ಸಾವಿರಕ್ಕೂ ಅಧಿಕ ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಸಂಜೆ ಶ್ರೀ ಗಜಾನನ ಕಲೆ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಟ್ರಸ್ಟ ಮೇಲಿನ ಮಣ್ಣಿಗೆ ಹೊನ್ನಾವರ (Honnavar ) ಇವರಿಂದ ನಡೆದ ವರದಯೋಗಿ ಶ್ರೀಧರ ನಾಟಕ ಪ್ರದರ್ಶನ ಪ್ರೇಕ್ಷಕರ ಮನರಂಜಿಸಿತು.