ಶಿವಮೊಗ್ಗ (Shivamogga): ರಾಯಣ್ಣ ಚೆನ್ನಮ್ಮ ಬ್ರಿಗೇಡ್ (RCB) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಅ.೭ರಂದು ಹುಬ್ಬಳ್ಳಿಯಲ್ಲಿ (Hubli) ಮುಖಂಡರ ಸಭೆ ಕರೆಯಲಾಗಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಇಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮತ್ತೆ ಬ್ರಿಗೇಡ್ ಚರ್ಚೆ ಆರಂಭವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಯಣ್ಣ ಚನ್ನಮ್ಮ ಬ್ರಿಗೇಡ್ (RCB) ರಚನೆ ಮಾಡಲು ಅ.೭ರಂದು ಬೆಳಿಗ್ಗೆ ೧೧ಕ್ಕೆ ಹುಬ್ಬಳ್ಳಿಯ (Hubballi) ಸ್ವಾತಿ ಹೋಟೆಲ್ನಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಇದನ್ನೂ ಓದಿ : ಅಕ್ಟೋಬರ್ ೫ರಂದು ವಿವಿಧೆಡೆ ಅಡಿಕೆ ಧಾರಣೆ
ಈ ಹಿಂದೆ ಜಮಖಂಡಿಯಲ್ಲಿ (Jamakhandi) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು (Basava Jaya Mruthyunjaya swamiji) ನನಗೆ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ (Basangouda Patil Yatnal) ಅವರಿಗೆ ಖಡ್ಗ ಕೊಟ್ಟು ಹಿಂದುಗಳಿಗೆ ರಕ್ಷಣೆ ಕೊಡಿ. ನಿಮಿಬ್ಬರಲ್ಲಿ ರಾಯಣ್ಣ ಮತ್ತು ಚನ್ನಮ್ಮ ಅವರ ರಕ್ತವಿದೆ. ಈ ಹಿನ್ನಲೆಯಲ್ಲಿ ಆರ್ಸಿಬಿ ರಚನೆ ಮಾಡಿ ಎಂದು ಹೇಳಿದ್ದರು. ಅಲ್ಲಿದ್ದ ಎಲ್ಲರೂ ಇದನ್ನು ಹರ್ಷದಿಂದ ಸ್ವಾಗತಿಸಿ ಬೆಂಬಲ ನೀಡಿದ್ದರು. ಈಗ ಅವರ ಆಶೀರ್ವದಾದಂತೆ ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದರು.
ಇದನ್ನೂ ಓದಿ : ಜರ್ಮನಿ ಹೊರಟ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಈ ಸಭೆಯಲ್ಲಿ ಯತ್ನಾಳ್ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದಾರೆ. ಇದು ಪಕ್ಷಾತೀತ ಸಭೆಯಾಗಿದೆ. ಇದರ ಮುಖ್ಯ ಉದ್ದೇಶವೇ ಎಲ್ಲ ವರ್ಗದ ಬಡವರಿಗೆ ನ್ಯಾಯ ಒದಗಿಸುವುದು. ಬ್ರಿಗೇಡ್ ಸ್ಥಾಪನೆ ಬಗ್ಗೆ ರಾಜ್ಯದ ನಾನಾ ಕಡೆಯಿಂದ ದೂರವಾಣಿ ಕರೆಗಳು ಬರುತ್ತಿವೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕರೆ ಮಾಡಿ ಒಳ್ಳೆಯ ನಿರ್ಧಾರವಾಗಿದೆ. ನಾವು ನಿಮ್ಮೊಂದಿಗೆ ಬರುತ್ತೇವೆ ಎಂಬ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ ಎಂದರು.
ಇದನ್ನೂ ಓದಿ : Bhat N Bhat ಖ್ಯಾತಿಯ ಸುದರ್ಶನ ಭಟ್ ಈಗ ಸಂಸಾರಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಮ್ಮುಖದಲ್ಲಿ ರಾಯಣ್ಣ-ಚೆನ್ನಮ್ಮ ಬ್ರಿಗೇಡ್ (RCB) ಎಂಬ ಹೆಸರಿನ ಬಗ್ಗೆ ಪ್ರಸ್ತಾಪವಾಗಿತ್ತು. ಆದರೆ ಬ್ರಿಗೇಡ್ಗೆ ಯಾವ ಹೆಸರಿಡಬೇಕು. ಯಾವ ಸ್ವಾಮೀಜಿಗಳನ್ನು ಕರೆಸಬೇಕು. ಉದ್ಘಾಟನೆಯನ್ನು ಎಲ್ಲಿ ಮತ್ತು ಹೇಗೆ ಮಾಡಬೇಕೆಂಬ ವಿಚಾರವೂ ಸೇರಿದಂತೆ ಸಂಘಟನೆಯ ಸಂರಚನೆ ಬಗ್ಗೆ ಚರ್ಚೆ ನಡೆಸಲಾಗುವುದು. ಅನೇಕ ಮಾಜಿ ಶಾಸಕರು ದೂರವಾಣಿ ಕರೆ ಮಾಡಿದ್ದಾರೆ. ರಾಜಕೀಯ ಪಕ್ಷಗಳಿಂದ ಬೇಸತ್ತ ರಾಜಕೀಯೇತರ ಅನೇಕರು ಸಂಘಟನೆ ಕೂಡಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರ ಸುದ್ದಿಗೋಷ್ಠಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : ಬಚ್ಚಲು ಕೋಣೆಯಲ್ಲಿ ನೇಣು ಬಿಗಿದುಕೊಂಡ ಕೃಷಿಕ