ಶಿರಸಿ(Sirsi) : ಇಲ್ಲಿನ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರಿಡಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಿದ್ದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR department) ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಚಾಲನೆ ನೀಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ನಂತರ ಮಾತನಾಡಿದ ಅವರು, ಸಮಾಜದಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR Department) ಪಾತ್ರ ಮಹತ್ವದ್ದಾಗಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ೨೧ಕ್ಕೂ ಅಧಿಕ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾಮಾನ್ಯ ಜನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಮುಟ್ಟಿಸುವಂತಹ ಕಾರ್ಯಗಳನ್ನು ಮಾಡಿದರೆ ಮಹತ್ತರವಾದ ಸಾಧನೆ ಸಾಧಿಸಲು ಸಾಧ್ಯವಿದೆ ಎಂದರು.
ಇದನ್ನೂ ಓದಿ : ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪಡೆದ ವಾಸುದೇವ ಮೊಗೇರ
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೆನರಾ (canara) ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಕ್ರೀಡಾಪಟುಗಳಿಗೆ ಕ್ರೀಡಾ ಜ್ಯೋತಿ ಹಸ್ತಾಂತರಿಸಿ ಮಾತನಾಡಿದರು. ಅತ್ಯಂತ ವಿಶಾಲವಾದ ಉತ್ತರ ಕನ್ನಡ (Uttarakannada) ಜಿಲ್ಲೆಯಲ್ಲಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ನೌಕರರಿಗೆ ಪರಸ್ಪರ ಮುಖಾಮುಖಿ ಭೇಟಿಗೆ ಇಂತಹ ಕ್ರೀಡಾಕೂಟ ಸಹಕಾರಿಯಾಗಿವೆ. ಇಂತಹ ಕ್ರೀಡಾಕೂಟ ಪ್ರತಿವರ್ಷ ಎಲ್ಲ ಇಲಾಖೆಗಳಲ್ಲಿ ನಡೆಯುವ ಅವಶ್ಯಕತೆಯಿದೆ ಎಂದರು.
ಇದನ್ನೂ ಓದಿ : RNS college/ ೯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ (Zilla Panchayat) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ ಆಯೋಜಿಸುವಂತೆ ಕಳೆದ ಮೂರು ತಿಂಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ನಿರಂತರ ಬೇಡಿಕೆಯಿತ್ತು. ಆದರೆ ಚುನಾವಣೆ, ಅತಿವೃಷ್ಠಿ ಹಿನ್ನಲೆಯಲ್ಲಿ ಕ್ರೀಡಾಕೂಟ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್‌ನ ಎಲ್ಲ ಶಾಖೆಗಳ ಮುಖ್ಯಸ್ಥರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಸಹಕಾರದೊಂದಿಗೆ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಆರ್‌ಡಿಪಿಆರ್ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ನರೇಗಾ, ಎನ್‌ಆರ್‌ಎಲ್‌ಎಂ, ಎಸ್‌ಬಿಎಂ, ಜೆಜೆಎಂ ಸೇರಿದಂತೆ ವಿವಿಧ ಯೋಜನೆಗಳಡಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕ್ರೀಡಾಕೂಟದ ಪಥಸಂಚಲನ, ಕ್ರೀಡಾ ಜ್ಯೋತಿ, ವೇದಿಕೆ ಕಾರ್ಯಕ್ರಮ ಹಾಗೂ ಕ್ರೀಡೆಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದನ್ನ ಕಂಡು ವೈಯಕ್ತಿಕವಾಗಿ ತುಂಬಾ ಸಂತೋಷವಾಗಿದೆ ಎಂದರು.
ಇದನ್ನೂ ಓದಿ : ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕಾಂಶ ವಿತರಣೆಗೆ ಚಾಲನೆ
ಇದೇ ವೇಳೆ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುತಿಸಿ ಜಿಲ್ಲಾ ಪಂಚಾಯತ್‌ನಿಂದ ನೀಡಲಾಗುವ ಬೆಸ್ಟ್ ಪಿಡಿಒ (Best PDO) ಆಫ್ ದಿ ಮಂತ್ ಪ್ರಶಸ್ತಿ ವಿಜೇತ ವಿವಿಧ ಗ್ರಾಮ ಪಂಚಾಯತಿಗಳ ಒಟ್ಟು ೧೬ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲೆಯ ೧೨ ತಾಲೂಕು ಪಂಚಾಯಿತಿಗಳಿಂದ ಸ್ಥಳೀಯ ಸಾಂಸ್ಕೃತಿಕ ಕಲೆ, ವೃತ್ತಿ, ಸಮುದಾಯ ಪ್ರತಿಬಿಂಬಿಸುವ ವೇಷಭೂಷಣ ತೊಟ್ಟ ಅಧಿಕಾರಿಗಳು, ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದರು.
ಇದನ್ನೂ ಓದಿ : ಮತ್ತೊಬ್ಬ ಮೀನುಗಾರ ಸಾವು; ಹೆಚ್ಚುತ್ತಿರುವ ಪ್ರಕರಣ
ಜಿಲ್ಲಾ ಪಂಚಾಯತ್‌ನ ಆಡಳಿತ ಹಾಗೂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಮುಖ್ಯ ಯೋಜನಾಧಿಕಾರಿಗಳು, ಯೋಜನಾ ನಿರ್ದೇಶಕರು(DRDA), ಆಡಳಿತ ಹಾಗೂ ಅಭಿವೃದ್ಧಿ ಶಾಖೆಯ ಸಹಾಯಕ ಕಾರ್ಯದರ್ಶಿಗಳು, ಎಲ್ಲ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆರ್‌ಡಬ್ಲ್ಯುಎಸ್ ಹಾಗೂ ಪಿಆರ್‌ಇಡಿ ಕಾರ್ಯನಿರ್ವಾಹಕ ಅಭಿಯಂತರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರು, ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಯೋಜನೆಗಳಡಿ ಕಾರ್ಯನಿರ್ವಹಿಸುವ ಸಂಯೋಜಕರು, ಸಮಾಲೋಚಕರು ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : SDMC / ವನಿತಾ ನಾಯ್ಕ ಅಧ್ಯಕ್ಷೆ, ಕೃಷ್ಣ ನಾಯ್ಕ ಉಪಾಧ್ಯಕ್ಷ