ಕಾರವಾರ (Karwar) : ರಾಜ್ಯ ಸರ್ಕಾರದ (Karnataka Government) ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ (Annabhagya Scheme) ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುವುದಿಲ್ಲ. ಅದರ ಬದಲಾಗಿ ಫೆಬ್ರವರಿ (February) ತಿಂಗಳಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ೫ ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಲಾಗಿದೆ ಎಂದು ಉತ್ತರ ಕನ್ನಡ (Uttara Kannada) ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅನ್ನಭಾಗ್ಯ ಯೋಜನೆಯಡಿ (Annabhagya Scheme) ಫೆಬ್ರವರಿ ತಿಂಗಳಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್‌ (March) ತಿಂಗಳಲ್ಲಿ ಅಕ್ಕಿ ವಿತರಿಸಲಾಗುವುದು. ಮಾರ್ಚ್‌ ತಿಂಗಳ ೧ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ ೭ ರಿಂದ ರಾತ್ರಿ ೮ ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳ ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದೆ. ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು. ಇ-ಕೆವೈಸಿ (e-KYC) ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : training/ ರಾಷ್ಟ್ರಮಟ್ಟದ ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು

ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-೧೯೫೫ ರಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಎಚ್ಚರಿಸಿದ್ದಾರೆ. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ ೧೯೬೭ ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : express trains/ ಎಕ್ಸಪ್ರೆಸ್‌ ರೈಲುಗಳಿಗೆ ಪ್ರಾಯೋಗಿಕ ನಿಲುಗಡೆ; ಎಲ್ಲೆಲ್ಲಿ ಗೊತ್ತಾ?