ಭಟ್ಕಳ ಡೈರಿ ವರದಿ
ಮುರುಡೇಶ್ವರ: ಹೊನ್ನಾವರದಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಯಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಆರ್. ರಿಯಾ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ತ್ರಿಷಾ ಶೇಟ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವರ್ಷಿಣಿ ನಾಯ್ಕ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕನಿಷ್ಕ ಮೊಗೇರ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಧಾರವಾಡ ಕ್ರೀಡಾಕೂಟದಲ್ಲಿ ಭಟ್ಕಳ ಸರ್ಕಾರಿ ಕಾಲೇಜಿನ ಸಾಧನೆ: 8 ಪದಕಗಳೊಂದಿಗೆ ನಾಲ್ಕನೇ ಸ್ಥಾನ
ಭಟ್ಕಳದ ವಿದ್ಯಾರ್ಥಿನಿ ಸಿಂಚನಾ ಆರ್. ನಾಯ್ಕ ರಾಜ್ಯಮಟ್ಟಕ್ಕೆ ಆಯ್ಕೆ



