ಭಟ್ಕಳ (Bhatkal) : ತಾಲೂಕಿನ ಮುರುಡೇಶ್ವರದ (Murudeshwar) ಆರ್ ಎನ್ ಶೆಟ್ಟಿ (RNS) ಪದವಿ ಪೂರ್ವ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಾರ್ಷಿಕೋತ್ಸವ (College Gathering) ಅದ್ದೂರಿಯಾಗಿ ಆಚರಿಸಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುಖ್ಯ ಅತಿಥಿಯಾಗಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ, ಕುಮಟಾದ (Kumta) ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸತೀಶ ನಾಯ್ಕ ಆಗಮಿಸಿದ್ದರು. ಈ ಸಂದರ್ಭ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಆರ್ ಎನ್ ಶೆಟ್ಟಿ (RNS) ಪದವಿ ಪೂರ್ವ ಕಾಲೇಜಿನ ಪಾತ್ರ ಪ್ರಮುಖವಾಗಿದೆ. ಈ ಹಿಂದಿನ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದ ಸ್ಥಾನ ಬಂದಿರೋದೆ ಸಾಕ್ಷಿ ಎಂದರು.
ಇದನ್ನೂ ಓದಿ : ವಿಶ್ವಾಸ ಮೋಘೆ ನಿಧನ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುರುಡೇಶ್ವರದ (Murdeshwar) ಜನತಾ ವಿದ್ಯಾಲಯದ ಕನ್ನಡ ಶಿಕ್ಷಕ ಮಹೇಶ ನಾಯ್ಕ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆರ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಡಾ.ದಿನೇಶ ಗಾಂವಕರ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಆಡಳಿತ ಮಂಡಳಿ ನೀಡುವ ವಿಶೇಷ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ಫಲಿತಾಂಶ ನೀಡಿದ್ದಕ್ಕೆ ಹೆಮ್ಮೆ ಇದೆ ಎಂದರು.
ಇದನ್ನೂ ಓದಿ : ಪಿಡಿಒ ಪರೀಕ್ಷೆ ಹಿನ್ನೆಲೆ ವಿಶೇಷ ಬಸ್
ಕಾಲೇಜಿನ ಪ್ರಾಚಾರ್ಯೆ ಅಶ್ವಿನಿ ಶೇಟ ವಾರ್ಷಿಕ ವರದಿ ವಾಚಿಸಿದರು. ಶಿಭಾನಿ ಜೈವಂತ ಸ್ವಾಗತಿಸಿದರೆ ರಿಹಾನ್ ವಂದಿಸಿದರು. ಸಹನಾ ನಾಯ್ಕ ಹಾಗೂ ನಯನಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳು ಮನರಂಜನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಇದನ್ನೂ ಓದಿ : bubble baby/ ಉ.ಕ. ಜಿಲ್ಲೆಯ ಮಗುವಿಗೆ ಅಸ್ಥಿಮಜ್ಜೆ ಕಸಿ