ಭಟ್ಕಳ: ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತವು ಭಟ್ಕಳದ ಮುರಿನಕಟ್ಟೆಯ (Murinakatte) ಸ್ಥಳಕ್ಕೆ ಸಂಬಂಧಿಸಿದಂತೆ ಎಲ್ಲಾ ಸಮುದಾಯದ ಹಿರಿಯ ನಾಗರಿಕರು ಹಾಗೂ ಮುಖಂಡರೊಂದಿಗೆ ಅನೇಕ ಬಾರಿ ಸಮಾಲೋಚನೆ ನಡೆಸಿ ಒಮ್ಮತದ ಅಭಿಪ್ರಾಯದೊಂದಿಗೆ ಪರ್ಯಾಯ ಸ್ಥಳವನ್ನು ಗುರುತಿಸಿದ್ದು, ಅದರಂತೆ ಎನ್ಹೆಚ್ಎಐ (NHAI) ಹಾಗೂ ಸ್ಥಳೀಯ ತಾಲೂಕು ಆಡಳಿತದ ಸಹಯೋಗದೊಂದಿಗೆ ಸ್ಥಳದಲ್ಲಿ ರಸ್ತೆ ಕಾಮಗಾರಿ ಆರಂಭಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮುರಿನಕಟ್ಟೆಯ (Murinakatte) ಈ ಕಾಮಗಾರಿಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಅಧಿಕಾರಿ/ಸಿಬ್ಬಂದಿ/ಡಿಎಆರ್(DAR)/ಕೆಎಸ್ಆರ್ಪಿ (KSRP) ಹಾಗೂ ಸ್ಪೆಷಲ್ ಆಕ್ಷನ್ ಫೋರ್ಸ್ ಗಳ ಕಟ್ಟುನಿಟ್ಟಾದ ಬಂದೋಬಸ್ತ್ ಮಾಡಲಾಗಿದೆ. ಈ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ್ದಲ್ಲಿ ಯಾವುದೇ ಕಾನೂನು & ಕಿಡಿಗೇಡಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Murinakatte/ ಶೀಘ್ರದಲ್ಲೇ ಮುರಿನಕಟ್ಟೆ ಮರುನಿರ್ಮಾಣ: ಸಂಸದ ಕಾಗೇರಿ

ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದದಲ್ಲಿ ಸುಳ್ಳು ಸುದ್ದಿಗಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ, ದ್ವೇಷವನ್ನುಂಟು ಮಾಡುವ ಪೊಸ್ಟ/ವೀಡಿಯೋಗಳನ್ನು ಮಾಡುವವರ ಮೇಲೆ ಪ್ರಕರಣ ದಾಖಲಿಸಿ ಕಾನೂನಿನಂತೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

Dirty water/ ತೆರೆದ ಚರಂಡಿಯಲ್ಲಿ ಗಲೀಜು ನೀರು: ಮಾರುತಿ ನಗರದಲ್ಲಿ ಅವ್ಯವಸ್ಥೆ