ಭಟ್ಕಳ (Bhatkal) : ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ವಿದ್ಯಾಂಜಲಿ ಪಬ್ಲಿಕ್ ಶಾಲೆ, ವಿದ್ಯಾಭಾರತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಶ್ರೀ ಗುರು ವಿದ್ಯಾಧಿರಾಜ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನಲ್ಲಿ ಪ್ರತ್ಯೇಕವಾಗಿ ೩ ರೊಬೋಟಿಕ್ಸ್ ಲ್ಯಾಬ್ಗಳನ್ನು (robotics lab) ನಿರ್ಮಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಇತ್ತೀಚೆಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ
ಉದ್ಘಾಟಕರಾಗಿ ಆಗಮಿಸಿ ಉಡುಪಿಯ (udupi) ಇಂಡಿವರ್ ಸಾಫ್ಟ್ಟೆಕ್ನ ಎಂ.ಡಿ. ದಿನೇಶ ಭಟ್ಟ ಮಾತನಾಡಿದರು. “ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಕನಸನ್ನು ಕಾಣಬೇಕು. ಅದನ್ನು ನನಸು ಮಾಡಿಕೊಳ್ಳಲು ಸೂಕ್ತ ಯೋಜನೆ ರೂಪಿಸಬೇಕು. ಕಾಲಮಿತಿಯಲ್ಲಿ ಯೋಜನೆ ಕಾರ್ಯಗತಗೊಳಿಸಿದರೆ ಯಶಸ್ಸು ಸಾಧ್ಯ” ಎಂದು ಕಿವಿಮಾತು ಹೇಳಿದರು.
ಇದನ್ನೂ ಓದಿ : ಸಮಯಪ್ರಜ್ಞೆ ಮೆರೆದ ಕರಾವಳಿ ಕಾವಲು ಪಡೆ ಸಿಬ್ಬಂದಿ
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಂಗಳೂರಿನ ನೈಸ್ ಅಟೋಮೇಶನ್ ಪ್ರೈ.ಲಿಮಿಟೆಡ್ನ ಸಂಸ್ಥಾಪಕ ನಿರ್ದೇಶಕ ನಾಗರಾಜ ಪ್ರಭು ಮಾತನಾಡಿ, “ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಕೌಶಲ್ಯಯುತ ಶಿಕ್ಷಣ ನೀಡಲು ರೊಬೋಟಿಕ್ಸ್ ಲ್ಯಾಬ್ಗಳನ್ನು (robotics lab) ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನಿರ್ಮಿಸಿರುವುದು ಶ್ಲಾಘನೀಯ” ಎಂದು ಹೇಳಿದರು.
ಇದನ್ನೂ ಓದಿ : ಮಹಿಳೆಯ ಚಿಕಿತ್ಸೆಗೆ ಸ್ಪಂದಿಸಿದ ಅಪ್ಪು ಅಭಿಮಾನಿಗಳು
ಅತಿಥಿಯಾಗಿ ಆಗಮಿಸಿದ್ದ ಬೆಂಗಳೂರಿನ (bengaluru) ಸಿಸ್ಕೋ ಸಿಸ್ಟಮ್ಸ್ನ ಪ್ರೊಜೆಕ್ಟ ಮ್ಯಾನೇಜರ ರಾಹುಲ ಕೊಲ್ಲೆ ಮಾತನಾಡಿ, “ವಿದ್ಯಾರ್ಥಿಗಳು ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಕೌಶಲ್ಯವಂತರಾದಾಗ, ಉದ್ಯೋಗ ಸೃಷ್ಟಿಸುವಂತವರು ಆಗಬಹುದು. ಆ ನಿಟ್ಟಿನಲ್ಲಿ ಪ್ರಯತ್ನಿಸಿ” ಎಂದು ಹೇಳಿದರು.
ಇದನ್ನೂ ಓದಿ : ಬೈಕ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಸಂಸ್ಥೆಯ ಹಳೆಯ ವಿದ್ಯಾರ್ಥಿನಿ ಪ್ರೀತಿ ಜನ್ನು, ಅಧ್ಯಕ್ಷ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿ ರವೀಂದ್ರ ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಅಂಗ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : Murder Case/ ಗಣೇಶ ಕೂಡ್ರಿಸಿದ ಮನೆಯಲ್ಲಿ ಸೂತಕದ ಛಾಯೆ
ಶ್ರೀ ಗುರು ಸುಧೀಂದ್ರ (Guru Sudhindra) ಕಾಲೇಜಿನ ಪ್ರಾಂಶುಪಾಲ ಶ್ರೀನಾಥ ಪೈ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ದಿ. ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ವೀರೇಂದ್ರ ಶಾನಭಾಗ ವಂದಿಸಿದರು. ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಶಿಕ್ಷಕಿ ಬಿಬಿಯನಾ ಗೋಮ್ಸ್ ಹಾಗೂ ಪ್ರೀತಿ ಪ್ರಭು ನಿರೂಪಿಸಿದರು.
ಇದನ್ನೂ ಓದಿ : ಖುದ್ದು ಬೋಟ್ ಚಲಾಯಿಸಿ ಸಮುದ್ರಕ್ಕೆ ಬಾಗಿನ ಅರ್ಪಿಸಿದ ಸಚಿವ