ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆಯಿಂದಾಗಿ ಕಾರವಾರದ ರಾಷ್ಟ್ರೀಯ ಹೆದ್ದಾರಿ ೬೬ ಸುರಂಗ ಮಾರ್ಗದಲ್ಲಿ ಕಲ್ಲು ಮತ್ತು ಮಣ್ಣು ಕುಸಿದು ಬಿದ್ದಿದೆ(Collapsed).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಗುಡ್ಡದಿಂದ ಜಾರಿಬಿದ್ದಿದೆ(Collapsed). ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಕಾರವಾರ ಟ್ರಾಫಿಕ್ ಪೊಲೀಸರು ಈ ಸುರಂಗ ಮಾರ್ಗದಿಂದ ಸಂಚಾರ ನಿಷೇಧಿಸಿದ್ದಾರೆ. ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವುಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಲಾಗಿದೆ. ಪರ್ಯಾಯವಾಗಿ ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ : ಶಿರೂರು ಪ್ರಕರಣ; ದೂರು ದಾಖಲಿಸಲು ಆದೇಶ