ಭಟ್ಕಳ (Bhatkal) : ಇಲ್ಲಿನ ಸಹಾಯಕ ಆಯುಕ್ತರ ಮತ್ತು ತಹಸೀಲ್ದಾರ ಕಚೇರಿಯಲ್ಲಿ ಸರ್ಕಾರಿ ಆದೇಶ ಸುತ್ತೋಲೆಯ ನಿಯಮ ಉಲ್ಲಂಘಿಸಿ ಒಂದೇ ಕಡೆ ಕೆಲಸ ಮಾಡುತ್ತಿರುವ ನೌಕರರ ವರ್ಗಾವಣೆಗೆ ಆಗ್ರಹಿಸಿ ನವೆಂಬರ್ ೨೫ರಂದು ಮತ್ತೆ ಪ್ರತಿಭಟನೆ ನಡೆಯಲಿದೆ. ಈ ಕುರಿತು ತಹಸೀಲ್ದಾರ ಅವರಿಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ (RTI Workers) ಭಟ್ಕಳ ಘಟಕದಿಂದ ಮನವಿ ಸಲ್ಲಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಹಿಂದೆ ವೇದಿಕೆ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಾಗ ತಹಸೀಲ್ದಾರರು ಪ್ರತಿಭಟನೆಗೆ ನೀಡಿದ್ದ ಅನುಮತಿ ರದ್ದುಪಡಿಸಿ ಪೊಲೀಸ್ ಬಲದಿಂದ ಪ್ರತಿಭಟನೆಯನ್ನು ಹತ್ತಿಕ್ಕಲಾಗಿತ್ತು. ಇದನ್ನು ಪ್ರಶ್ನಿಸಿ ವೇದಿಕೆ ಮುಖಂಡರು ನ್ಯಾಯಾಲಯದ ಮೆಟ್ಟಿಲೇರಿದ್ದರು. ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ (Highcourt) ಕಾನೂನು ಬದ್ಧ ಪ್ರತಿಭಟನೆಗೆ ಅವಕಾಶ ಕೊಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕರ್ತರು ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧರಾಗಿದ್ದಾರೆ.
ಇದನ್ನೂ ಓದಿ : ಗೋವಾ ಪೊಲೀಸರಿಂದ ಕಾರವಾರದ ಮಹಿಳೆ ಬಂಧನ
ಜಿಲ್ಲೆಯ ಭಟ್ಕಳ ತಾಲೂಕಿನ ಕಂದಾಯ ಇಲಾಖೆಯಲ್ಲಿ ಹಲವಾರು ನೌಕರರು ವರ್ಗಾವಣೆ ಮಾರ್ಗಸೂಚಿ ಮತ್ತು ಇನ್ನಿತರ ನಿಮಮಾಳಿಗಳನ್ನು ಪಾಲಿಸದೆ ಒಂದೇ ಕಡೆ ೫-೧೦ ವರ್ಷಗಳಿಂತ ಹೆಚ್ಚು ಕಾಲ ಒಂದೇ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಕಾನೂನು ಬಾಹಿರವಾಗಿದೆ. ಕೆಸಿಎಸ್‌ಆರ್ ನಿಯಮಗಳನ್ನು ಉಲ್ಲಂಘಿಸಿ ರಾಜಕೀಯ ಮತ್ತು ಇನ್ನಿತರ ಪ್ರಭಾವವನ್ನು ಬಳಸಿಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆ ಹಿನ್ನೆಲೆಯಲ್ಲಿ ತಹಸೀಲ್ದಾರರು ಕೂಡ ಅವರ ಪ್ರಭಾವಕ್ಕೆ ಒಳಗಾಗಿ ಹೈಕೋರ್ಟ ನಿರ್ದೇಶನವನ್ನು ಸಹ ಪಾಲಿಸದವರಾಗಿರುವುದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅಗೌರವ ತೋರಿಸಿದಂತೆ ಎಂದು ಮನವಿಯಲ್ಲಿ ವೇದಿಕೆ ಕಾರ್ಯಕರ್ತರು (RTI Workers) ಖಂಡಿಸಿದ್ದಾರೆ.
ಇದನ್ನೂ ಓದಿ : ಸಂತೆಗೆ ಹೋದ ನಾಲ್ವರಿಗೆ ಸಿಡಿಲು ಬಡಿತ
ಭಟ್ಕಳ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲು ಜಿಲ್ಲಾಧಿಕಾರಿಗಳು ಅನುಮತಿಸಲಾಗಿರುವ ಸ್ಥಳದಲ್ಲಿ ಪ್ರತಿಭಟನೆ ಮಾಡಲು ಸಿದ್ಧರಾಗಿದ್ದೇವೆ. ಭಟ್ಕಳ ತಾಲೂಕಿನಲ್ಲಿ ಪ್ರತಿಭಟನೆಗಳಿಗೆ ಅನುಮತಿ ನೀಡಲು ತಹಸೀಲ್ದಾರರು ಸಕ್ಷಮ ಪ್ರಾಧಿಕಾರಿಗಳಾಗಿಲ್ಲದಿದ್ದರೆ ಸಕ್ಷಮ ಪ್ರಾಧಿಕಾರಿಗಳು ಯಾರು ಎಂಬುದನ್ನು ತಾವು ಪತ್ರದಲ್ಲಿ ಉಲ್ಲೇಖಿಸಿಲ್ಲ. ನಿಮ್ಮ ಕಚೇರಿ ವ್ಯಾಪ್ತಿಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ತಾವುಗಳು ಅಥವಾ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಿಗಳಿಂದ ಅನುಮತಿ ನೀಡುವುದು/ಕೊಡಿಸುವುದು ತಮ್ಮ ಜವಾಬ್ದಾರಿಯುತ ಕರ್ತವ್ಯವಾಗಿರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಮುರ್ಡೇಶ್ವರದಲ್ಲಿ ರೈಲು ಬಡಿದು ವ್ಯಕ್ತಿ ಸಾವು
ನವೆಂಬರ್ ೨೫ರಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗಕ್ಕೆ ಅನುಮತಿ ನೀಡಬೇಕು. ತಪ್ಪಿದಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಲಯದ ಆದೇಶಕ್ಕೆ ಗೌರವ ನೀಡದ ತಹಸೀಲ್ದಾರರ ಮೇಲೆ ನ್ಯಾಯಾಂಗದ ಆದೇಶ ಉಲ್ಲಂಘನೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ. ಮನವಿಯನ್ನು ಪ್ರಭಾರ ತಹಸೀಲ್ದಾರ ಅಶೋಕ ಭಟ್ಟ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಶಂಕರ ನಾಯ್ಕ ಬೆಟ್ಕೂರು, ತಾಲೂಕಾ ಅಧ್ಯಕ್ಷ ನಾಗೇಂದ್ರ ನಾಯ್ಕ, ಉಪಾಧ್ಯಕ್ಷ ವಸಂತ ದೇವಾಡಿಗ, ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ, ದಯಾನಂದ ಮೊಗೇರ, ದಯಾನಂದ ನಾಯ್ಕ, ಮೋಹನ ನಾಯ್ಕ ಇದ್ದರು.
ವಿಡಿಯೋ ನೋಡಿ : ಈ ಪೋರ ಕಥೆ ಹೇಳ್ತಾನೆ… ಕೇಳ್ತೀರಾ?