ಬೆಂಗಳೂರು (Bengaluru) : ಮಾಜಿ ವಿದೇಶಾಂಗ ಸಚಿವ (foreign minister) , ಕರ್ನಾಟಕದ (Karnataka) ಮಾಜಿ ಮುಖ್ಯಮಂತ್ರಿ (Former CM) ಎಸ್ಎಂ ಕೃಷ್ಣ (S M Krishna) ಇಂದು (ಡಿಸೆಂಬರ್ ೧೦) ನಸುಕಿನ ಜಾವ ೨.೩೦ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು (S M Krishna) ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ (Manipal Hospital) ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ ಕಾರಂತ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಇದನ್ನೂ ಓದಿ : ಮೂವರಿಂದ ಕಾರ್ಮಿಕನ ಮೇಲೆ ಹಲ್ಲೆ