ಭಟ್ಕಳ(Bhatkal): ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ ವತಿಯಿಂದ ಭಟ್ಕಳ ತಾಲೂಕಿನಲ್ಲಿ ಸುಜ್ಞಾನನಿಧಿ ಕಾರ್ಯಕ್ರಮದಡಿ ೧೩೧ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರು ಪತ್ರ (sanction letter) ಹಾಗೂ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಶಿಕ್ಷಕರ ಕೊರತೆ ಇರುವ ೧೨ ಶಾಲೆಗಳಿಗೆ ಶಿಕ್ಷಕರ ಒದಗಿಸಿ ಮಂಜೂರಾತಿ ಪತ್ರವನ್ನು (sanction letter) ಕ್ಷೇತ್ರ ಶಿಕ್ಷಣಾಧಿಕಾರಿ (BEO) ವೆಂಕಟೇಶ ನಾಯ್ಕರವರ ಮೂಲಕ ವಿತರಿಸಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳದ ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ(Block Education Officer) ವೆಂಕಟೇಶ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ವಿರೇಂದ್ರ ಹೆಗ್ಗಡೆಯವರು ಬ್ಯಾಂಕ್‌ ಮೂಲಕ ಹಣಕಾಸಿನ ವ್ಯವಸ್ಥೆ ಅಷ್ಟೆ ಅಲ್ಲದೇ ಶಿಕ್ಷಣ, ಸಮಾಜ ಅಭಿವೃದ್ಧಿ, ಗ್ರಾಮೀಣ ಅಭಿವೃದ್ದಿಗೆ ಒತ್ತು ನೀಡಿದ್ದಾರೆ. ಗ್ರಾಮೀಣ ಜನರ ಬದುಕನ್ನು ಹಸನುಗೊಳಿಸುವುದರ ಜೊತೆಗೆ ಮಹಿಳೆಯರ ಸ್ವಾವಲಂಬಿನೆ ಬದುಕಿಗೆ ಹತ್ತಾರು ಕಾರ್ಯಕ್ರಮಗಳನ್ನ ನಡೆಸುತ್ತಿದ್ದಾರೆ. ಆ ಮೂಲಕ ಸಾಕಷ್ಟು ಅನುಕೂಲವಾಗಿದೆ ಎಂದರು.

ಇದನ್ನೂ ಓದಿ :  ಭಟ್ಕಳದಲ್ಲಿ ಅಪ್ರಾಪ್ತ ಸಹಿತ ಇಬ್ಬರ ಬಂಧನ

ತಾಲೂಕು ಪತ್ರಕರ್ತ (Journalist) ಸಂಘದ ಅಧ್ಯಕ್ಷ ವಿಷ್ಣು ದೇವಾಡಿಗ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬನೆ ಬಂದಿದೆ. ಇದರಿಂದ ಗ್ರಾಮೀಣ ಮಹಿಳೆಯರ ಸಬಲೀಕರಣ ಆಗಿದೆ. ಗ್ರಾಮೀಣ ಮಟ್ಟದ ಎಷ್ಟೋ ಮಹಿಳೆಯರಿಗೆ ಯೋಜನೆ ದಾರಿ ದೀಪವಾಗಿದೆ ಎಂದರು.

ಇದನ್ನೂ ಓದಿ :  ಸೇಫ್‌ ಲಾಕರ್‌ ಉದ್ಘಾಟನೆ

ಉತ್ತರ ಕನ್ನಡ (Uttara kannada) ಜಿಲ್ಲೆಯ ಸಂಸ್ಥೆಯ ನಿರ್ದೇಶಕ ಮಹೇಶ ಎಂ.ಡಿ. ಮಾತನಾಡಿ, ಭಟ್ಕಳ ತಾಲೂಕಿನಲ್ಲಿ ಒಟ್ಟು ೨೪೩ ವಿದ್ಯಾರ್ಥಿಗಳಿಗೆ ರೂ ೧೯.೫೪ ಲಕ್ಷ ಮೊತ್ತ ವಿತರಣೆ ಆಗಿದೆ. ಇದುವರೆಗೂ ಒಟ್ಟು ೩೨೭ ವಿದ್ಯಾರ್ಥಿಗಳಿಗೆ ರೂ. ೩೮.೪೭ ಲಕ್ಷ ಮೊತ್ತದ ಸುಜ್ಞಾನನಿಧಿ ಶಿಷ್ಯ ವೇತನ ವಿತರಣೆ ಆಗಿದೆ. ಜಿಲ್ಲೆಯಲ್ಲಿ ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ೪೯೮೨ ವಿದ್ಯಾರ್ಥಿಗಳಿಗೆ ೫.೭೭ ಕೋಟಿ ರೂ. ಮೊತ್ತದ ಸುಜ್ಞಾನನಿಧಿ ಶಿಷ್ಯವೇತನ ನೀಡಲಾಗಿದೆ. ತಾಲೂಕಿನ ತೀರಾ ಹಳ್ಳಿ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶೈಕ್ಷಣಿಕ ಹಿನ್ನಡೆಯಾಗುವುದನ್ನು ತಪ್ಪಿಸಲು ೧೨ ಶಾಲೆಗಳಿಗೆ ಶಿಕ್ಷಕರನ್ನು ಒದಗಿಸಲಾಗಿದೆ. ಶೈಕ್ಷಣಿಕವಾಗಿ ಬಹಳ ಅನುಕೂಲವಾಗಿದೆ. ಎಂದರು.

ಇದನ್ನೂ ಓದಿ :  ಸದ್ಗುರು ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ

ಯೋಜನೆಯಲ್ಲಿನ ಕಾರ್ಯಕ್ರಮಗಳ ಬಗ್ಗೆ ಪರಿಚಯಿಸುತ್ತಾ, ವಿದ್ಯಾರ್ಥಿಗಳು ವಿದ್ಯೆ ಸಂಪತ್ತಾಗಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮ ಹಾಕಬೇಕು. ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸುವಂತಾಗಬೇಕು,” ಎಂದು ಮಹೇಶ ಎಂ.ಡಿ. ಹೇಳಿದರು. ಮಂಜೂರಾತಿ ಪತ್ರ ವಿತರಣೆ (sanction letter) ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಯೊಜನಾಧಿಕಾರಿ ಗಣೇಶ ಡಿ. ನಾಯ್ಕ ಸ್ವಾಗತಿಸಿದರು. ಮೇಲ್ವಿಚಾರಕ ಅಶೋಕ ಗೌಡ ನಿರೂಪಿಸಿದರು. ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

ಇದನ್ನೂ ಓದಿ :  ಕಾರವಾರ ಶೈಕ್ಷಣಿಕ ಜಿಲ್ಲೆಯ ೧೫ ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿ