ಭಟ್ಕಳ (Bhatkal): ತಾಲೂಕಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನು ಉಂಟುಮಾಡುತ್ತಿರುವ ಸಮಾಜಘಾತಕ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಟ್ಕಳ ಎಸ್.ಡಿ.ಪಿ.ಐ. (SDPI) ಯಿಂದ ಭಟ್ಕಳ ಸಹಾಯಕ ಆಯುಕ್ತರ ಮೂಲಕ ಉತ್ತರ ಕನ್ನಡ (Uttara Kannada) ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನವೆಂಬರ್ ೧ರಂದು ತಾಲೂಕು ಆಡಳಿತ ಭಟ್ಕಳದಲ್ಲಿ ನಡೆದ ಕನ್ನಡ ರಾಜ್ಯೋತ್ಸವ (Kannada Rajyotsava) ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಕಾಝಿಯಾ ಅಪ್ಪಾ ಹುಝಫಾ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಸ್ಥಳೀಯ ಬಿಜೆಪಿ (BJP) ಮುಖಂಡರು, ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಅವರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳಿಗೆ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :  “ಪೋಸಿಗಾಗಿ ಭೂಮಿ ಪೂಜೆ ಮಾಡುವ ಜನಪ್ರತಿನಿಧಿಗಳಿದ್ದಾರೆ”

ವಾಸ್ತವದಲ್ಲಿ ಪಂಚಾಯತ್ ಅಧ್ಯಕ್ಷೆ ಕಾಝಿಯಾ ಅಪ್ಪಾ ಹುಝಫಾ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪ ನಮನ ಮಾಡಲು ನಿರಾಕರಿಸಲಿಲ್ಲ. ಬದಲಾಗಿ ಇತರ ವೇದಿಕೆಯಲ್ಲಿದ್ದ ಗಣ್ಯರಿಗೆ ಅವಕಾಶ ಮಾಡಿ ಕೊಟ್ಟು ಗೌರವ ಪೂರ್ವಕ ಭಾವನೆಯೊಂದಿಗೆ ವೇದಿಕೆಯಲ್ಲಿಯೇ ನಿಂತಿರುವುದನ್ನು ಫೋಟೋ ಮತ್ತು ವಿಡಿಯೋಗಳಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ.  ಆದರೆ, ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರು ಪಂಚಾಯತ್ ಅಧ್ಯಕ್ಷೆ ಆಗಿರುವುದನ್ನು ಸಹಿಸದೇ ಅಪಪ್ರಚಾರಗಳನ್ನು ನಡೆಸಿ ಅವಮಾನ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ. (SDPI) ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ, ತಾಲೂಕು ಉಪಾಧ್ಯಕ್ಷ ವಸೀಂ ಮನೆಗಾರ್ ಮತ್ತಿತರರು ಉಪಸ್ಥಿತರಿದ್ದರು.

ವಿಡಿಯೋ ಸಹಿತ ಇದನ್ನೂ ಓದಿ : ಜಾಲಿ ಪಪಂ‌ ಅಧ್ಯಕ್ಷೆಯಿಂದ ಕನ್ನಡ ಭುವನೇಶ್ವರಿಗೆ ಅಗೌರವ