ಭಟ್ಕಳ: ಇಲ್ಲಿನ ಹಿರಿಯ ವೈದ್ಯ (Senior Physician) ಹಾಗೂ ಭಟ್ಕಳ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾಗಿದ್ದ ಡಾ ಸುರೇಶ ವಿ ನಾಯಕ (೮೪) ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಯಲ್ಲಿ (private hospital) ರವಿವಾರ ಬೆಳಿಗ್ಗೆ ನಿಧನರಾಗಿದ್ದಾರೆ (passes away). ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ ಎಜುಕೇಶನ್ ಟ್ರಸ್ಟ್ ಬೆಳವಣಿಗೆಗಾಗಿ ಡಾ ಸುರೇಶ ನಾಯಕ ತಮ್ಮ ಜೀವನದ ೫೫ಕ್ಕೂ ಹೆಚ್ಚು ವರ್ಷ ದುಡಿದಿದ್ದಾರೆ. ಆರಂಭದಲ್ಲಿ ಕೇವಲ ಒಂದೇ ಶಿಕ್ಷಣ ಸಂಸ್ಥೆಯನ್ನು ಹೊಂದಿದ್ದ ಟ್ರಸ್ಟ್, ಇಂದು ಏಳು ಶಿಕ್ಷಣ ಸಂಸ್ಥೆಗಳಾಗಿ ಬೆಳೆದು ನಿಂತಿದೆ. ಪ್ರಸ್ತುತ ೩೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಅವರು ಭಟ್ಕಳದ (Bhatkal) ಹಿರಿಯ ವೈದ್ಯರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು.

Ekadashi/ ಲಕ್ಷತುಳಸಿ ಅರ್ಚನೆ, ಸ್ವರ್ಣ ಪಾದುಕಾ ಭಿಕ್ಷೆ ಸಂಪನ್ನ

ಭಟ್ಕಳ ನಗರದ ನಾಗಪ್ಪ ನಾಯಕ ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಮಧ್ಯಾಹ್ನ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಮುಖಂಡರು, ವಿವಿಧ ರಂಗಗಳ ಗಣ್ಯರು, ಭಟ್ಕಳ ಎಜುಕೇಶನ್ ಟ್ರಸ್ಟ್ನ ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು ಆಗಮಿಸಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

(passes away)

Gold Medal/ ಹೆಡ್ ಕಾನ್ಸ್‌ಟೇಬಲ್ ದೀಪಕ್ ನಾಯ್ಕಗೆ ಡಿಜಿ–ಐಜಿಪಿ ಶ್ಲಾಘನಾ ಚಿನ್ನದ ಪದಕ