ಬೆಂಗಳೂರು (Bengaluru): ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಎನ್‌ಐಎ (NIA) ಪ್ರಕರಣಗಳ ವಿಶೇಷ ನ್ಯಾಯಾಲಯ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ಮೂಲದ ಮೂವರು ಉಗ್ರರಿಗೂ ಶಿಕ್ಷೆ (Sentenced) ಪ್ರಕಟಿಸಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಡಾ. ಸೈಯದ್ ಇಸ್ಮಾಯಿಲ್ ಅಫಾಕ್ ಲಂಕಾ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇನ್ನಿಬ್ಬರಾದ ಅಬ್ದುಲ್ ಸಬೂರ್ ಮತ್ತು ಸದ್ದಾಂ ಹುಸೇನ್‌ಗೆ ೧೦ ವರ್ಷಗಳ ಸಾದಾ ಜೈಲು ಶಿಕ್ಷೆಯನ್ನು ಮಂಗಳವಾರ ವಿಧಿಸಲಾಗಿದೆ. ನ್ಯಾಯಾಲಯವು ಅಫಾಕ್‌ಗೆ ೧.೫೫ ಲಕ್ಷ ರೂಪಾಯಿ ಹಾಗೂ ಸಬೂರ್ ಮತ್ತು ಹುಸೇನ್‌ಗೆ ತಲಾ ೯೫ ಸಾ,ರೂಪಾಯಿ ದಂಡ ವಿಧಿಸಿದೆ. ಮೂವರಿಗೆ ಐಪಿಸಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ (Sentenced) ವಿಧಿಸಲಾಗಿದೆ.
ಇದನ್ನೂ ಓದಿ : judgment/ ಭಟ್ಕಳದ ಮೂವರು ಶಂಕಿತ ಭಯೋತ್ಪಾದಕರು ದೋಷಿ
೨೦೧೫ರಲ್ಲಿ ನಗರದ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಸಿಸಿಬಿ ಎಸಿಪಿ ತಮ್ಮಯ್ಯ ಎಂಕೆ ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ : CCTV/ ಕದ್ದ ಸ್ಥಳದಲ್ಲೇ ಬೈಕ್ ಬಿಟ್ಟು ಹೋದ…. !