ಭಟ್ಕಳ: ನಗರದ ಆಸರಕೇರಿಯ ವಿ ಟಿ ರಸ್ತೆಯಲ್ಲಿನ ಒಳಚರಂಡಿ ಕಾಮಗಾರಿ (sewage work) ಸಮರ್ಪಕವಾಗಿ ಪೂರ್ಣಗೊಳ್ಳದ (Neglected work) ಕಾರಣ ಗಲೀಜು ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ವಿಶೇಷವಾಗಿ ದೇವಸ್ಥಾನಕ್ಕೆ ತೆರಳುವ ಭಕ್ತರು, ಪಾದಚಾರಿಗಳು ಹಾಗೂ ರಸ್ತೆಯ ಸುತ್ತಮುತ್ತಲಿನ ನಿವಾಸಿಗಳು ದುರ್ವಾಸನೆ ಮತ್ತು ಅಸ್ವಚ್ಛತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಯ ಮೇಲೆಯೇ ಕೊಳಚೆ ನೀರು (sewage water) ಹರಿಯುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯಕ್ಕೂ (health) ಅಪಾಯ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Chippikallu tragedy/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ಮಿಡಿದ ಮುರುಡೇಶ್ವರ ಆಟೋ ಚಾಲಕರು
ಈ ಕುರಿತು ಪ್ರತಿಕ್ರಿಯಿಸಿರುವ ಆಸರಕೇರಿಯ ವೆಂಕಟೇಶ್ವರ ನಾಮಧಾರಿ ಸಂಘದ ಅಧ್ಯಕ್ಷ ಶ್ರೀಧರ ನಾಯ್ಕ, ನಗರಸಭೆಯ ನಿರ್ಲಕ್ಷ್ಯದಿಂದ ಸಮಸ್ಯೆ ದಿನೇದಿನೇ ಗಂಭೀರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಒಳಚರಂಡಿ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬೇಕು (sewage work) ಎಂದು ಅವರು ಆಗ್ರಹಿಸಿದ್ದಾರೆ. ಸ್ಥಳೀಯ ನಿವಾಸಿಗಳು ಮತ್ತು ಭಕ್ತರ ಅನುಕೂಲಕ್ಕಾಗಿ ನಗರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



