ಭಟ್ಕಳ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಡ ಸ್ಟೋರೇಜ್ ಯೋಜನೆ (sharavati project) ರದ್ದುಗೊಳಿಸಬೇಕು ಹಾಗೂ ದಶಕಗಳ ಬೇಡಿಕೆಯಾದ ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ, ಬೆಳಗಾವಿಯ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಯಂಗ್ ಒನ್ ಇಂಡಿಯಾ ಸಂಘಟನೆಯ ಪ್ರಮುಖ ಹಾಗೂ ಸಾಮಾಜಿಕ ಕಾರ್ಯಕರ್ತ ಬಲಸೆ ಮಾಸ್ತಪ್ಪ ನಾಯ್ಕ ನೇತೃತ್ವದಲ್ಲಿ ನಡೆದ ಈ ಧರಣಿಯಲ್ಲಿ ಹೋರಾಟಗಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: Bhatkal utsav/ ನಾಲ್ಕು ದಿನಗಳ ಕಾಲ ಭಟ್ಕಳ ಉತ್ಸವ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಲಸೆ ಮಾಸ್ತಪ್ಪ ನಾಯ್ಕ, “ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ (multispeciality hospital) ಅಗತ್ಯವಿದೆ ಎಂದು ಕಳೆದ ಎರಡು ದಶಕಗಳಿಂದ ಕಿರುಚುತ್ತಿದ್ದರೂ ಸರ್ಕಾರಕ್ಕೆ ನಮ್ಮ ಕೂಗು ಕೇಳಿಸುತ್ತಿಲ್ಲ. ಜಿಲ್ಲೆಯ ಅಮೂಲ್ಯವಾದ ಪ್ರಕೃತಿಯನ್ನು ನಾಶಮಾಡುವ ಮತ್ತು ಜನವಿರೋಧಿಯಾಗಿರುವ ಯೋಜನೆಗಳನ್ನು (sharavati project) ಮಾತ್ರ ಜಿಲ್ಲೆಯ ಮೇಲೆ ಬಲವಂತವಾಗಿ ಹೇರಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಸ್ಪತ್ರೆಯ ವಿಚಾರದಲ್ಲಿ ಮೌನ ವಹಿಸಿರುವುದು ಖಂಡನೀಯ” ಎಂದು ಕಿಡಿಕಾರಿದರು.
ಇದನ್ನು ಓದಿ: Murudeshwar/ ರಿಕ್ಷಾ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲು ಮನವಿ
ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೋರಾಟಗಾರರಿಂದ ಮನವಿ ಪತ್ರ ಸ್ವೀಕರಿಸಿದರು. “ಜಿಲ್ಲೆಯ ಜನರ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಬೇಡಿಕೆಯ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಈ ಬಗ್ಗೆ ಶೀಘ್ರದಲ್ಲೇ ಉನ್ನತ ಮಟ್ಟದ ಚರ್ಚೆ ನಡೆಸಿ, ಬೇಡಿಕೆಯನ್ನು ಈಡೇರಿಸಲು ಪ್ರಾಮಾಣಿಕವಾಗಿ ಪರಿಶೀಲಿಸಲಾಗುವುದು” ಎಂದು ಭರವಸೆ ನೀಡಿದರು.
ಇದನ್ನು ಓದಿ: Clearance/ ರಂಗಿನಕಟ್ಟೆ ಅಶ್ವತ್ಥ ಕಟ್ಟೆ ತೆರವಿಗೆ ದಿನಾಂಕ ನಿಗದಿ
ಧರಣಿಯಲ್ಲಿ ‘ಶರಾವತಿ ಉಳಿಸಿ ಹೋರಾಟ ಸಮಿತಿ’ಯ ಜೆ ಟಿ ಪೈ, ಬೊಮ್ಮಾರ ಗಣೇಶ ಹೆಗಡೆ, ಜೆ ಡಿ ಎಸ್ ಪ್ರಮುಖರಾದ ಸೂರಜ್ ನಾಯ್ಕ ಸೋನಿ, ಟಿ ಟಿ ನಾಯ್ಕ ಮೂಡ್ಕಣಿ, ಬಾಲಕೃಷ್ಣ ಗೌಡ, ಎಚ್ ಆರ್ ಗಣೇಶ, ಬಜಾಜ ಪ್ರಶಾಂತ, ಮಹೇಶ ನಾಯ್ಕ ಸೇರಿದಂತೆ ಜಿಲ್ಲೆಯ ನೂರಾರು ಪ್ರಮುಖರು ಪಾಲ್ಗೊಂಡು ಶರಾವತಿ ಯೋಜನೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.



