ಭಟ್ಕಳ ಡೈರಿ ವರದಿ
ಭಟ್ಕಳ: ನವಜಾತ ಶಿಶುವೊಂದು ಮೃತಪಟ್ಟ ಬೆನ್ನಲ್ಲೇ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಆಕ್ರೋಶಗೊಂಡ ಸಂಬಂಧಿಕರು ಶಿರಾಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಹಾಲುಣಿಸುವ ವೇಳೆ ಏಕಾಏಕಿ ಅಸ್ವಸ್ಥ: ಶಿರಾಲಿಯ ದಂಪತಿಗೆ ಅ.೨೭ರಂದು ಎರಡನೇ ಮಗು ಜನಿಸಿತ್ತು. ಬಳಿಕ ತಾಯಿ ಮಗುವಿಗೆ ಹಾಲುಣಿಸುತ್ತಿದ್ದ ವೇಳೆ ಶಿಶು ಏಕಾಏಕಿ ನೀಲಿ ಬಣ್ಣಕ್ಕೆ ತಿರುಗಿ, ಉಸಿರಾಟದ ತೊಂದರೆಗೆ ಒಳಗಾಗಿದೆ ಎನ್ನಲಾಗಿದೆ. ಕೂಡಲೇ ಆಸ್ಪತ್ರೆಯ ಶಿಶು ತಜ್ಞರು ಮಗುವನ್ನು ಪರೀಕ್ಷಿಸಿ ಅಗತ್ಯ ಚಿಕಿತ್ಸೆ ನೀಡಿದರೂ, ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ವೈದ್ಯರ ನಿರ್ಲಕ್ಷ್ಯ ಆರೋಪ: ಶಿಶುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಮಗುವಿನ ಸಾವಿನಿಂದ ತೀವ್ರ ಆಕ್ರೋಶಗೊಂಡ ಸಂಬಂಧಿಕರು, ವೈದ್ಯರು ಹಾಗೂ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ :
ವೈದ್ಯಕೀಯ ಕ್ಷೇತ್ರದ ಹೊಸ ಬೆಳವಣಿಗೆಗಳತ್ತ ಭಟ್ಕಳದ ವೈದ್ಯರ ಗಮನ
ಭಟ್ಕಳದ ವಿದ್ಯಾರ್ಥಿಗಳ ಸಾಧನೆಗೆ ಶಹಬ್ಬಾಸ್: MBBS, IIT ಪ್ರವೇಶ ಪಡೆದವರಿಗೆ ಗೌರವ




