ಭಟ್ಕಳ ಡೈರಿ ವರದಿ
ಭಟ್ಕಳ: ತಾಲೂಕಿನ ಶಿರಾಲಿ ವಲಯ ಮಟ್ಟದ ೨೦೨೬-೨೭ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟವು ಜನತಾ ವಿದ್ಯಾಲಯದ ಸಹಯೋಗದಲ್ಲಿ ಯಶಸ್ವಿಯಾಗಿ ನಡೆಯಿತು.
ಜನತಾ ವಿದ್ಯಾಲಯದ ಪೂರ್ವ ವಿದ್ಯಾರ್ಥಿ ಪರಿವಾರದ ಅಧ್ಯಕ್ಷ ಶಂಕರ ನಾಯ್ಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಷ್ಣು ಶಾನಭಾಗ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಮಾರುತಿ ನಾಯ್ಕ ಕ್ರೀಡಾಧ್ವಜ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶಾಲೆಯ ಪೂರ್ವ ವಿದ್ಯಾರ್ಥಿ ಹಾಗೂ ಉದ್ಯಮಿ ಪ್ರವೀಣ ನಾಯ್ಕ ಕ್ರೀಡಾಜ್ಯೋತಿ ಬೆಳಗಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ನಿವೃತ್ತ ಶಿಕ್ಷಕಿ ರಾಜಮ್ಮ ಹಿಚ್ಕಡ, ಗುರುನಮನ ಬಳಗದ ಅಧ್ಯಕ್ಷ ಶ್ರೀಧರ ಶೇಟ ಶಿರಾಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜನತಾ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಜಿ ಎಸ್ ಹೆಗಡೆ ಹಾಗೂ ಬಾಲಮಂದಿರದ ಮುಖ್ಯೋಪಾಧ್ಯಾಯಿನಿ ಕಲ್ಪನಾ ನಾಯ್ಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜನತಾ ವಿದ್ಯಾಲಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅರುಣ ಗೌಡ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಮುಖ್ಯೋಪಾಧ್ಯಾಯಿನಿ ಆಶಾ ಕಲ್ಮನೆ ಸ್ವಾಗತಿಸಿದರು. ಶಿಕ್ಷಕಿ ಸೀಮಾ ನಾಯ್ಕ ವಂದಿಸಿದರು. ಹಿರಿಯ ಶಿಕ್ಷಕಿ ಲೀಲಾವತಿ ಮೊಗೇರ ಕಾರ್ಯಕ್ರಮ ನಿರೂಪಿಸಿದರು.
ಕ್ರೀಡಾಕೂಟದ ಆತಿಥ್ಯ ವಹಿಸಿದ್ದ ಜನತಾ ವಿದ್ಯಾಲಯ ಪ್ರೌಢಶಾಲೆಯು ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಸಮಗ್ರ ವೀರಾಗ್ರಣಿ ಪ್ರಶಸ್ತಿ ಜನತಾ ವಿದ್ಯಾಲಯಕ್ಕೆ:
ಶಿರಾಲಿ ವಲಯ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಶಿರಾಲಿಯ ಜನತಾ ವಿದ್ಯಾಲಯ ಪ್ರೌಢಶಾಲೆ ‘ಸಮಗ್ರ ವೀರಾಗ್ರಣಿ’ ಪ್ರಶಸ್ತಿಯನ್ನು ಪಡೆದುಕೊಂಡಿತು.
ಇದನ್ನೂ ಓದಿ:
ಭಟ್ಕಳದಲ್ಲಿ ದಸರಾ ಕ್ರೀಡಾಕೂಟ ಆರಂಭ; ೫೦೦ಕ್ಕೂ ಹೆಚ್ಚು ಕ್ರೀಡಾಪಟುಗಳ ಭಾಗಿ
ಉಪ್ಪೋಣಿ ವಲಯಮಟ್ಟದ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ
ಮುರ್ಡೇಶ್ವರ ದೇವಸ್ಥಾನದಲ್ಲಿ ಭವ್ಯ ಬಿಲ್ವಾರ್ಚನೆ: ೨ ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ
ಜಾಲಿಯಲ್ಲಿ ಕಳೆಗಟ್ಟಿದ ‘ಕೃಷ್ಣ ಲೀಲಾ–೦೨’: ಪುಟಾಣಿಗಳ ಕೃಷ್ಣ ವೇಷಧಾರಿ ಸ್ಪರ್ಧೆ
