ಭಟ್ಕಳ : ತಾಲೂಕಿನ ಶಕ್ತಿಸ್ಥಳಗಳಲ್ಲೊಂದಾದ ಕಿತ್ರೆಯ ಶ್ರೀ ಕ್ಷೇತ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ರಥೋತ್ಸವ (Rathotsava) ಗುರುವಾರ ಮಧ್ಯಾಹ್ನ ಅದ್ಧೂರಿಯಿಂದ ನೆರವೇರಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ರಥೋತ್ಸವದ (Rathotsava) ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ತಾಂತ್ರಿಕ ವೇ.ಮೂ. ಅಮೃತೇಶ ಭಟ್ಟ ಗೋಕರ್ಣ (Gokarna) ಹಾಗೂ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ ಬಾಲಚಂದ್ರ ಭಟ್ಟ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು. ನೂರಾರು ಜನರು ರಥ ಕಾಣಿಕೆ ಸಲ್ಲಿಸಿದರು. ಗುರುವಾರ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ಗಣೇಶ ಪೂಜೆ, ಪುಣ್ಯಾಹ, ರುದ್ರಹವನದ ಮಹಾಸಂಕಲ್ಪ, ಶ್ರೀದೇವರಿಗೆ ಕಲಾವೃದ್ಧಿ-ಯಾದಿ ಹವನ, ವೀರಭದ್ರ ದೇವರ ಪ್ರೀತ್ಯರ್ಥ ರುದ್ರವನದ ಪೂರ್ಣಾಹುತಿ ನಡೆಯಿತು.

ಇದನ್ನೂ ಓದಿ : ಮರಕ್ಕೆ ಕ್ರೂಸರ್‌ ಡಿಕ್ಕಿ ಹೊಡೆದು ಮಹಿಳೆ ಸಾವು

ದೇವಿಯ ರಜತ ಉತ್ಸವ ಮೂರ್ತಿ ಸಮರ್ಪಣೆ ಕೂಡ ನೆರವೇರಿತು. ಮಧ್ಯಾಹ್ನ ಸಾವಿರಕ್ಕೂ ಅಧಿಕ ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಸಂಜೆ ಜನ್ಸಾಲೆ ರಾಘವೇಂದ್ರ ಆಚಾರ್ಯ ಮತ್ತು ಕಾರ್ತಿಕ ಚಿಟ್ಟಾಣಿ ಅವರ ಸಾರಥ್ಯದಲ್ಲಿ ನಡೆದ ಪಾಂಚಜನ್ಯ ಯಕ್ಷಗಾನ (Yakshagana) ಪ್ರದರ್ಶನ ಪ್ರೇಕ್ಷಕರ ಮನರಂಜಿಸಿತು. ನಂತರ ಭರತ ನಾಟ್ಯ (Bharathanatya) ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಇದನ್ನೂ ಓದಿ : Yakshagana week/ ಪೌರಾಣಿಕ ಯಕ್ಷಗಾನ ಸಪ್ತಾಹಕ್ಕೆ ಚಾಲನೆ

ರಥೋತ್ಸವದಲ್ಲಿ ದೇವಸ್ಥಾನದ ಮೊಕ್ತೇಸರ ಉಮೇಶ ಹೆಗಡೆ, ದೇವಿಮನೆ ಆಡಳಿತ ಸಮಿತಿಯ ಅಧ್ಯಕ್ಷ ವಿನಾಯಕ ಭಟ್ಟ ಬೆಟ್ಕೂರು, ಉಪಾಧ್ಯಕ್ಷ ಪರಮೇಶ್ವರ ಭಟ್ಟ, ನಿಕಟಪೂರ್ವ ಅಧ್ಯಕ್ಷ ಶಿವಾನಂದ ಹೆಬ್ಬಾರ, ಭವತಾರಿಣಿ ವಲಯದ ಅಧ್ಯಕ್ಷ ವಿನಾಯಕ ಭಟ್ಟ ತೆಕ್ನಗದ್ದೆ, ಪ್ರಮುಖರಾದ ಎಂ ಎಂ ಹೆಬ್ಬಾರ, ನಾರಾಯಣ ಹೆಬ್ಬಾರ ಬೆಣಂದೂರು, ರಾಧಾಕೃಷ್ಣ ಬೆಂಗಳೂರು (Bengaluru), ಅನಂತ ಹೆಬ್ಬಾರ, ಗಣೇಶ ಹೆಬ್ಬಾರ, ಶ್ರೀನಿವಾಸ ಹೆಗಡೆ, ಅಶೋಕ ಭಟ್ಟ, ಗಣಪಯ್ಯ ಹೆಗಡೆ ಮುಂತಾವರು ಉಪಸ್ಥಿತರಿದ್ದರು.

ರಥೋತ್ಸವದ ವಿಡಿಯೋವನ್ನು  ಯೂಟ್ಯೂಬ್, ಇನ್ಸ್ಟಾಗ್ರಾಂ  ಮತ್ತು  ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ : Yakshagana/ ಇಡಗುಂಜಿ ಮೇಳದವರಿಂದ ಯಕ್ಷಗಾನ ಪ್ರದರ್ಶನ