ಅಂಕೋಲಾ : ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು. ಸುರಿಯುವ ಮಳೆಯಲ್ಲೇ ಗಮ್ ಬೂಟ್ ಧರಿಸಿ ರಾಡಿಯಲ್ಲಿ ನಡೆಯುತ್ತಾ ಗುಡ್ಡಕುಸಿತ(land slide) ಪ್ರದೇಶ ವೀಕ್ಷಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda), ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ(Mankal Vaidya) ಮತ್ತು ಶಾಸಕ ಸತೀಶ ಸೈಲ್ ಜೊತೆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸುನೀಲ ನಾಯ್ಕ ದೂರು

ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಾಚರಣೆಯ ಪ್ರಗತಿ ತಿಳಿದುಕೊಂಡರು. SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ  ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

ವಿಡಿಯೋ ಸಹಿತ ಇದನ್ನೂ ಓದಿ : ಮರಕ್ಕೆ ಡಿಕ್ಕಿ ಹೊಡೆದ ಬಸ್; ಚಾಲಕನ ಕಾಲು ಕಟ್

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ರೂಪಾಯಿ ಪರಿಹಾರವನ್ನು ತಕ್ಷಣ ಘೋಷಣೆ ಮಾಡಿ, ಈಗಾಗಲೇ ವಿತರಿಸಲಾಗಿದೆ. ಈಗಾಗಲೇ ೬ ಮೃತ ದೇಹಗಳು ಸಿಕ್ಕಿವೆ. ಇನ್ನು ನಾಪತ್ತೆಯಾದವರ ಹುಡುಕಾಟ ನಡೆಯುತ್ತಿದೆ ಎಂದರು.

ವಿಡಿಯೋ ಸಹಿತ ಇದನ್ನೂ ಓದಿ : ಶಿರೂರು, ಉಳುವರೆ ಗ್ರಾಮಕ್ಕೆ‌ ಬಿ.ವೈ. ವಿಜಯೇಂದ್ರ ಭೇಟಿ

ಸತತ 6 ದಿನಗಳಿಂದ NDRF, SDRF ಹಾಗೂ ನುರಿತ ರಕ್ಷಣಾ ತಂಡಗಳು ಸತತವಾಗಿ ಮಳೆಯನ್ನು ಲೆಕ್ಕಿಸದ ಕಾರ್ಯಾಚರಣೆ ನಡೆಸುತ್ತಿದ್ದು. ಇಂದಿನಿಂದ ಭಾರತೀಯ ಸೇನೆ ತಂಡ ಕೂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು ಶೀಘ್ರದಲ್ಲೇ ನಾಪತ್ತೆಯಾದವರನ್ನು ಪತ್ತೆ ಹಚ್ಚಲಾಗುವುದು ಎಂದರು.

ವಿಡಿಯೋ ಸಹಿತ ಇದನ್ನೂ ಓದಿ : ಭಾರಿ ಮಳೆಗೆ ಮನೆಯ ಅರ್ಧ ಭಾಗ ಕುಸಿತ

ನಾಪತ್ತೆಯಾದವರ ಹುಡುಕಾಟಕ್ಕೆ ಇನ್ನಷ್ಟು ರಕ್ಷಣಾ ತಂಡಗಳನ್ನು ಅವಶ್ಯಕತೆ ಇದ್ದಲ್ಲಿ ಕರೆಸಿಕೊಳ್ಳುವ ಬಗ್ಗೆ ಹಾಗೂ ಕಾರ್ಯಚರಣೆಗೆ ಯಾವುದೇ ರೀತಿಯಲ್ಲಿ ಸಹಾಯ ಸಹಕಾರ ನಮ್ಮ ಸರಕಾರ ಮಾಡುವಲ್ಲಿ ಸಿದ್ದವಿದೆ. ಘಟನೆಯಲ್ಲಿ ಮನೆ ಕಳೆದುಕೊಂಡವರಿಗೆ ಸರಕಾರ ಪರಿಹಾರ ನೀಡಿದೆ. ಮುಂದಿನ ದಿನದಲ್ಲಿ ಇನ್ನಷ್ಟು ರೀತಿಯಲ್ಲಿ ಸಹಾಯ ಮಾಡುವ ಬಗ್ಗೆ ಮುಖ್ಯಮಂತ್ರಿ ಸಂತ್ರಸ್ತರಿಗೆ ಧೈರ್ಯ ತುಂಬಿದರು.

ವಿಡಿಯೋ ಸಹಿತ ಇದನ್ನೂ ಓದಿರಿ : ಸರ್ಕಾರಿ ಶಾಲೆಗೆ ಪ್ರತಿಷ್ಠಿತ ಪ್ರಶಸ್ತಿ- ಯಾಕೆ ಗೊತ್ತಾ?

ಲೋಕೋಪಯೋಗಿ ಇಲಾಖೆ ಸತೀಶ್ ಜಾರಕಿಹೊಳಿ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್, ಶಾಲಿನಿ ರಜನಿಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.