ಅಂಕೋಲಾ (Ankola) : ಅನಾರೋಗ್ಯದಿಂದ ಬಳಲುತ್ತಿದ್ದ ಹಾಡು ಹಕ್ಕಿ, ಪದ್ಮಶ್ರೀ (Padmashree) ಪುರಸ್ಕೃತೆ ಸುಕ್ರಿ ಗೌಡ (Sukri Gowda) ನಿಧನರಾಗಿದ್ದಾರೆ. ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಗುರುವಾರ ನಸುಕಿನ ೩.೩೦ರ ವೇಳೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಉತ್ತರಕನ್ನಡ (Uttar Kannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಬಡಿಗೇರಿಯ ಸುಕ್ರಜ್ಜಿ ಕಳೆದ ಹಲವು ವರ್ಷದಿಂದ ಉಸಿರಾಟದ ಸಮಸ್ಯೆ ಸೇರಿದಂತೆ ಕೆಲ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಳೆದ ಎರಡು ದಿನದ ಹಿಂದೆಯೂ ಮಣಿಪಾಲದ (Manipal) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು.
ಇದನ್ನು ಓದಿ : German Bakery / ಜರ್ಮನ್ ಬೇಕರಿ ಸ್ಫೋಟಕ್ಕೆ ೧೫ ವರ್ಷ
ನಾಡೋಜ (Nadoja), ರಾಜ್ಯೋತ್ಸವ (Rajyotsava), ಜಾನಪದ ಶ್ರೀ (Janapada Shree) ಪ್ರಶಸ್ತಿ ಪಡೆದಿದ್ದ ಸುಕ್ರಜ್ಜಿ (Sukri Gowda), ೨೦೧೭ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಅವರು ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಉತ್ತರಕನ್ನಡ ಜಿಲ್ಲೆಗೆ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ (Multi-speciality hospital), ತಮ್ಮೂರನ್ನು ಸಾರಾಯಿ ಮುಕ್ತ ಗ್ರಾಮವನ್ನಾಗಿಸಲು ಹೋರಾಟಗಳ ಮೂಲಕ ಮುಂಚೂಣಿಯಲ್ಲಿ ಇರುತ್ತಿದ್ದರು.
ಇದನ್ನು ಓದಿ : Cyber crime/ ಭಟ್ಕಳದಲ್ಲಿ ಬ್ಯಾಂಕ್ ಖಾತೆಗೆ ಕನ್ನ