ಭಟ್ಕಳ ಡೈರಿ ವರದಿ

ಭಟ್ಕಳ: ಸೋಡಿಗದ್ದೆಯ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಸನ್ನಿಧಿಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಗೋ ಪೂಜೆ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನೆರವೇರಿಸಲಾಯಿತು. ಭಕ್ತರು ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು. ಕಾರ್ಯಕ್ರಮವು ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಪೂರ್ವಕ ವಾತಾವರಣದಲ್ಲಿ ನೆರವೇರಿತು.

ದೇವಸ್ಥಾನದ ಆವರಣದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವಸ್ಥಾನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜು ಮೊಗೇರ, ಕಾರ್ಯದರ್ಶಿ ದೇವಿದಾಸ ಮೊಗೇರ, ಕೋಶಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಸದಸ್ಯರಾದ ಡಿ.ಎಲ್. ನಾಯ್ಕ, ನಾರಾಯಣ ನಾಯ್ಕ, ಶಂಕರ ಮೊಗೇರ, ಚನ್ನಯ್ಯ ಮೊಗೇರ, ಚೋಳರಾಜ ಮೊಗೇರ ಹಾಗೂ ನಾಗರಾಜ ಮೊಗೇರ ಸೇರಿದಂತೆ ಹಲವು ಭಕ್ತಾದಿಗಳು ಉಪಸ್ಥಿತರಿದ್ದರು.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ:

ಹೂತ್ಕಳ ಕ್ರಾಸ್ ಬಳಿ ಕಾರು–ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಮುರ್ಡೇಶ್ವರದಲ್ಲಿ ರಸ್ತೆಬದಿ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ; ಇಬ್ಬರು ವಶಕ್ಕೆ, ಉಳಿದವರು ಪರಾರಿ