ಭಟ್ಕಳ (Bhatkal) : ತಾಲೂಕಿನ ಭಟ್ಕಳ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಕನೀರ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದ ಆರೋಪಿತರ ಪತ್ತೆಗಾಗಿ ವಿಶೇಷ ತಂಡ (Special team) ರಚಿಸಲಾಗಿದೆ ಎಂದು ಉತ್ತರ ಕನ್ನಡ (Uttara Kannada) ಜಿಲ್ಲಾ ಎಸ್ಪಿ ಎಂ.ನಾರಾಯಣ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ನಾರಾಯಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಜರಿದ್ದ ಪೊಲೀಸ್‌ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನೂ ನೀಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಕುರಿತು ಹೇಳಿಕೆ ಹೊರಡಿಸಿರುವ ಅವರು, ಗೋವು ವಧೆ ಪ್ರಕರಣವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ ಇಲಾಖೆಯು ತುಂಬಾ ಗಂಭೀರವಾಗಿ ಪರಿಗಣಿಸಿದೆ. ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕೃಷ್ಣಮೂರ್ತಿ ಜಿ. ಮಾರ್ಗದರ್ಶನದಲ್ಲಿ ವಿಶೇಷ ತಂಡ ( Special team) ರಚಿಸಲಾಗಿದೆ. ಭಟ್ಕಳ ಡಿವೈಎಸ್‌ಪಿ ಮಹೇಶ ಈ ವಿಶೇಷ ತಂಡದ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಈ ತಂಡ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದ್ದಾರೆ.  ಅತಿ ಶೀಘ್ರದಲ್ಲಿ ಆರೋಪಿತರನ್ನು ಬಂಧಿಸಲಾಗುವುದು. ಈ ಬಗ್ಗೆ ಸಾರ್ವಜನಿಕರು ಪೊಲೀಸ್‌ ಇಲಾಖೆಯೊಂದಿಗೆ ಕೈಜೋಡಿಸುವಂತೆ ಕೋರಿರುವ ಎಸ್‌ಪಿ ಎಂ. ನಾರಾಯಣ, ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ೧೧೨ ಗೆ ಕರೆ ಮಾಡಲು ಕೋರಿದ್ದಾರೆ.

ಇದನ್ನೂ ಓದಿ : Pregnant cattle/ ಭಟ್ಕಳದಲ್ಲಿ ಅಮಾನುಷ ಕೃತ್ಯ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕನೀರ ವೆಂಕಟಾಪುರ ಹೊಳೆಯ ದಂಡೆಯ ಮೇಲೆ ಯಾರೋ ಆರೋಪಿತರು ಜಾನುವಾರನ್ನು ಹಿಂಸಾತ್ಮಕವಾಗಿ ವಧೆ ಮಾಡಿ, ಅದರ ಅಂಗಭಾಗಗಳನ್ನು ಮತ್ತು ಆಕಳ ಕರುವನ್ನು ಬೀಸಾಡಿದ್ದರು. ಅದು ಹರಿದು ಬಂದು ಏ.೧೭ರಂದು ಬೆಳಿಗ್ಗೆ ೧೦ ಗಂಟೆಗೆ ಕುಕ್ಕನೀರ ಹೊಳೆಯ ದಂಡೆಯ ಮೇಲೆ ಸಿಕ್ಕಿತ್ತು. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Ganja Seized/ ೭ ಕೆ.ಜಿ. ಗಾಂಜಾ ಹೊಂದಿದ್ದ ಭಟ್ಕಳದ ವ್ಯಕ್ತಿ ಬಂಧನ

ಈ ಹಿಂದೆ ಹೊನ್ನಾವರ ತಾಲೂಕಿನ ಹೊಸಾಕುಳಿಯಲ್ಲೂ ಗರ್ಭಿಣಿ ಹಸುವನ್ನು ಕೊಂದು ಅಂದರ ಅಂಗಾಗಗಳನ್ನು ಎಸೆಯಲಾಗಿತ್ತು. ಆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಯಶಸ್ವಿಯಾಗಿದ್ದರು. ಪ್ರಕರಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಚಿವ ಮಂಕಾಳ ವೈದ್ಯ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲುವ ಬಗ್ಗೆ ಮಾತನಾಡಿದ್ದರು. ಅವರ ಹೇಳಿಕೆಗೆ ಕೆಲ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರು. ಎಸ್‌ಡಿಪಿಐ ಭಟ್ಕಳದಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ಅವರ ಸ್ವ ಕ್ಷೇತ್ರದಲ್ಲೇ ಗರ್ಭಿಣಿ ಹಸು ಕೊಂದ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ : Chain snatching/ ಮುರ್ಡೇಶ್ವರದಲ್ಲಿ ಸರ ಎಗರಿಸಿದ ಬೈಕ್‌ ಸವಾರರು