ಭಟ್ಕಳ (Bhatkal): ನಾರಾಯಣಗುರು (Narayan guru) ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ತಾಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ “ಸಾಮಾಜಿಕ ಪರಿವರ್ತನೆಯಲ್ಲಿ ನಾರಾಯಣ ಗುರುಗಳ ಚಿಂತನೆ” ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯು (speech competition) ಇಲ್ಲಿನ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಭಟ್ಕಳ ತಾಲೂಕಿನ ವಿವಿಧ ಕಾಲೇಜುಗಳಿಂದ ಹದಿನಾಲ್ಕು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಭಾಷಣ ಸ್ಪರ್ಧೆಯಲ್ಲಿ ನ್ಯೂ ಇಂಗ್ಲಿಷ್ ಪ.ಪೂ. ಕಾಲೇಜಿನ ವಿಧಾತ್ರಿ ಭಟ್ ಪ್ರಥಮ, ಆರ್.ಎನ್.ಎಸ್. ಪ.ಪೂ. ಕಾಲೇಜಿನ ನಾಗಶ್ರೀ ಹೆಗಡೆ ದ್ವಿತೀಯ ಹಾಗೂ ಆನಂದಾಶ್ರಮ ಪ.ಪೂ. ಕಾಲೇಜಿನ ವರ್ಷಿತಾ ನಾಯ್ಕ ಮತ್ತು ಬೀನಾ ವೈದ್ಯ ಪ.ಪೂ. ಕಾಲೇಜಿನ ಚೈತ್ರಾ ನಾಯ್ಕ ಜಂಟಿಯಾಗಿ ತೃತೀಯ ಬಹುಮಾನವನ್ನು ಪಡೆದುಕೊಂಡರು.

ಇದನ್ನೂ ಓದಿ : ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ಕಾರ್ಯಕ್ರಮದ ಆರಂಭದಲ್ಲಿ ಕಸಾಪ‌ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಾರಾಯಣಗುರು ಜಯಂತ್ಯುತ್ಸವ ಸಮಿತಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಾರಾಯಣ ಗುರುಗಳ ಕುರಿತಾದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಆ ಮೂಲಕ ವಿದ್ಯಾರ್ಥಿಗಳಲ್ಲಿ ನಾರಾಯಣ ಗುರುಗಳ ಜೀವನ, ಅವರ ಸಾಮಾಜಿಕ ಧಾರ್ಮಿಕ ಸುಧಾರಣಾ ಕಾರ್ಯಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದು ಗಂಗಾಧರ ನಾಯ್ಕ ಹೇಳಿದರು.

ಇದನ್ನೂ ಓದಿ : ಆಗಸ್ಟ್‌ ೨೪ರಂದು ವಿವಿಧೆಡೆ ಅಡಿಕೆ ಧಾರಣೆ

ಕಾರ್ಯಕ್ರಮದಲ್ಲಿ ನಾರಾಯಣ ಗುರು ಜಯಂತ್ಯುತ್ಸವ ಸಮಿತಿಯ ಸಂಚಾಲಕ ಮನಮೋಹನ ನಾಯ್ಕ, ನಾಮಧಾರಿ ಸಮಾಜದ ಮಾಜಿ ಉಪಾಧ್ಯಕ್ಷ ಭವಾನಿಶಂಕರ‌ ನಾಯ್ಕ, ಸ್ಪಂದನ ಸಂಸ್ಥೆಯ ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಈಶ್ವರ ನಾಯ್ಕ ತಲಗೋಡು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಇದನ್ನೂ ಓದಿ :  ಪೊಲೀಸ್ ಇಲಾಖೆ ಸಂಗ್ರಹಿಸಿದ ದಂಡದ ಮೊತ್ತ ಚಿನ್ನದ ವ್ಯಾಪಾರಿ ಖಾತೆಗೆ !?

ಸಾಹಿತಿ ಮಾನಾಸುತ ಶಂಭು ಹೆಗಡೆ, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ. ಭಂಡಾರಿ
ಭಾಷಣ ಸ್ಪರ್ಧೆಯ ನಿರ್ಣಾಯಕರಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ವಿಷಯ ಸಂಗ್ರಹ, ಮಾತುಗಾರಿಕೆ ಕೌಶಲ್ಯದ ಕುರಿತು ನಿರ್ಣಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಗಂಡನನ್ನು ಕೊಂದ ಪಾಪಿ ಪತ್ನಿಗೆ ಜೀವಾವಧಿ ಶಿಕ್ಷೆ

ತಾಲೂಕಿನ ನಾರಾಯಣ ಗುರು ಜಯಂತ್ಯುತ್ಸವ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಭಟ್ಕಳದ ಕರಿಕಲ್ ಧ್ಯಾನ ಮಂದಿರದಲ್ಲಿ ಆಗಸ್ಟ್ ೨೫ರಂದು ನಡೆಯಲಿರುವ ನಾರಾಯಣಗುರು ಜಯಂತ್ಯುತ್ಸವ ನಿಮಿತ್ತ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ನಗದು ಹಾಗೂ ಪುಸ್ತಕ ಬಹುಮಾನ, ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನವನ್ನು ವಿತರಿಸಲಾಗುತ್ತದೆ. ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ನಾರಾಯಣ ಗುರು ಜಯಂತ್ಯುತ್ಸವದ ಸಂಚಾಲಕ ಮನಮೋಹನ ನಾಯ್ಕ ತಿಳಿಸಿದ್ದಾರೆ‌.

ಇದನ್ನೂ ಓದಿ : ವಿದ್ಯಾರ್ಥಿನಿ ಜೊತೆ ಪ್ರೀತಿ ನಾಟಕವಾಡಿದ ವಿವಾಹಿತ !