ಭಟ್ಕಳ: ತಾಲೂಕಿನ ಜಾಲಿ ಸರಕಾರಿ ಪ್ರೌಢಶಾಲೆಯ ೨೩ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ ಶಾಲಾ ಫಲಿತಾಂಶ ೧೦೦% ಆಗಿದ್ದು, ನಿರಂತರ ನಾಲ್ಕನೇ ಬಾರಿ ಈ ಸಾಧನೆ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ (SSLC result).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

೨೩ ವಿದ್ಯಾರ್ಥಿಗಳಲ್ಲಿ ೧೪ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 8 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು ಓರ್ವ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಹನಾ ತಿಮ್ಮಪ್ಪ ನಾಯ್ಕ (೬೧೧ ಅಂಕ/೯೭.೭೬%) ಶಾಲೆಗೆ ಪ್ರಥಮ, ಮನೋಜ ಸಣ್ಣು ಗೊಂಡ (೬೦೫/೯೬.೮%)ದ್ವಿತೀಯ ಮತ್ತು ಸಿಂಚನಾ ರಾಜು ನಾಯ್ಕ (೫೮೯/೯೪.೨೪ %) ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.ಗುಣಮಟ್ಟದ ದೃಷ್ಟಿಯಲ್ಲಿಯೂ ಶಾಲೆ ‘ಎ’ ಗ್ರೇಡ್ ಪಡೆದಿದ್ದು. ಎಲ್ಲ ವಿದ್ಯಾರ್ಥಿಗಳ ಗುಣಾತ್ಮಕ ಸರಾಸರಿ ಅಂಕ ೯೩.೦೩ರಷ್ಟಿದೆ (SSLC result).

SSLC result/ ಕೆಪಿಎಸ್ ತೆರ್ನಮಕ್ಕಿಗೆ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ೩  ರ‍್ಯಾಂಕ್

ಜಾಲಿ ಸರಕಾರಿ ಪ್ರೌಢಶಾಲೆ ಪ್ರಾರಂಭವಾದಾಗಿನಿಂದ ಇದುವರೆಗಿನ ೧೬ ಎಸ್ ಎಸ್ ಎಲ್ ಸಿ ಬ್ಯಾಚ್ ಗಳಲ್ಲಿ ೧೧ ಸಲ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ. ತೀರಾ ಹಿಂದುಳಿದ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಊರ ನಾಗರಿಕರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಅಭಿನಂದನೆ ತಿಳಿಸಿದ್ದಾರೆ.

SSLC result/ ಭಟ್ಕಳದ ಚೆನ್ನಮ್ಮ ವಸತಿ ಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ಶೇ ೧೦೦ ಸಾಧನೆ