ಭಟ್ಕಳ: ತಾಲೂಕಿನ ಶಿರಾಲಿ ಸಮೀಪದ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯು ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಶೇ ೧೦೦ ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ (SSLC result).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪರೀಕ್ಷೆಗೆ ಕುಳಿತ ಎಲ್ಲಾ ೫೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೩೬ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೧೭ ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು ೫ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿರುತ್ತಾರೆ. ಶ್ರೀಶಾ ಶ್ರೀಧರ ಶೇಟ್ (೬೧೨/ಶೇ ೯೮) ಶಾಲೆಗೆ ಪ್ರಥಮ, ಅಶ್ವಿತಾ ಜಯಂತ ಮೊಗೇರ (೫೯೭/ಶೇ ೯೬) ದ್ವಿತೀಯ ಹಾಗೂ ಪದ್ಮಪ್ರಸಾದ ಪಾರ್ಶ್ವನಾಥ ಜೈನ್ (೫೯೧/ ಶೇ ೯೫ ) ತೃತೀಯ ಸ್ಥಾನ ಗಳಿಸಿದ್ದಾರೆ. ಗುಣಮಟ್ಟದ ದೃಷ್ಟಿಯಲ್ಲಿಯೂ ಶಾಲೆ ‘ಎ’ ಗ್ರೇಡ್ ಪಡೆದಿದೆ (SSLC result).
ICSE result/ ಐಸಿಎಸ್ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆ ಸಾಧನೆ
ಶಿರಾಲಿಯ ಗ್ರಾಮೀಣ ಪರಿಸರದಲ್ಲಿ ೨೩ ವರ್ಷಗಳಿಂದ ಗುಣಮಟ್ಟದ ಮತ್ತು ಅತ್ಯುತ್ತಮ ಶಿಕ್ಷಣವನ್ನು ಈ ಶಾಲೆ ನೀಡುತ್ತಾ ಬಂದಿದೆ. ಅನುದಾನ ರಹಿತ ಶಾಲೆಯಾದರೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ರಾತ್ರಿ ಶಾಲೆಗಳನ್ನು ನಡೆಸಿ, ವಿಶೇಷ ತರಗತಿಗಳ ಮೂಲಕ ತರಬೇತಿ ನೀಡಿ, ಪ್ರತಿ ವರ್ಷ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
PUC result/ ಮರುಮೌಲ್ಯಮಾಪನ ಫಲಿತಾಂಶದಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಭಟ್ಕಳದ ತೇಜಸ್ ಸಾಧನೆ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಸ್ಯಾಮ್ಯುಯೆಲ್ ವರ್ಗಿಸ್, ಶಿಕ್ಷಕ ವೃಂದ, ಪೋಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ನಿರಂತರ ಮಾರ್ಗದರ್ಶನ ಮತ್ತು ಪೋಷಕರ ಸಹಕಾರವೇ ಈ ಯಶಸ್ಸಿಗೆ ಕಾರಣವೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
hackathon/ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ನಲ್ಲಿ AITM ವಿದ್ಯಾರ್ಥಿಗಳಿಗೆ ಪ್ರಥಮ ಪ್ರಶಸ್ತಿ



