ಭಟ್ಕಳ : ಇಲ್ಲಿನ ಪ್ರತಿಷ್ಠಿತ ಶ್ರೀ ಗುರು ವಿದ್ಯಾಧಿರಾಜ (Vidyadhiraj) ದಿ ನ್ಯೂ ಇಂಗ್ಲೀಷ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ (cultural competition) ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಇತ್ತೀಚೆಗೆ ಕುಂದಗೋಳದ (Kundagol) ಕೆ.ಎಲ್.ಇ. ಪ್ರೇರಣಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಭಾಗ ಮಟ್ಟದ ಪ್ರಥಮ ಪಿ.ಯು.ಸಿ ಯ ಪೂರ್ಣಾ ಹೆಗಡೆ ಭಾವಗೀತೆಯಲ್ಲಿ ಪ್ರಥಮ, ಅಂಕಿತಾ ಕಾಮತ ಭಕ್ತಿಗೀತೆಯಲ್ಲಿ ತೃತೀಯ ಹಾಗೂ ದ್ವಿತೀಯ ಪಿ.ಯು.ಸಿ ಯ ಶ್ರೀರಕ್ಷಾ ಹೆಬ್ಬಾರ ಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕ ಸ್ಪರ್ಧೆಯಲ್ಲಿ (cultural competition) ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿ ಆರ್.ಜಿ.ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶಾನಭಾಗ, ಮಹಾವಿದ್ಯಾಲಯದ ಸಾಂಸ್ಕೃತಿಕ ಸ್ಪರ್ಧೆಗಳ ಸಂಯೋಜಕರಾಗಿರುವ ಉಪನ್ಯಾಸಕ ನಾಗೇಂದ್ರ ಪೈ ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ : cyclone/ ಬೆಂಗಳೂರು ಅಸ್ತವ್ಯಸ್ತ; ಉತ್ತರ ಕನ್ನಡದಲ್ಲೂ ಮಳೆ ಸಂಭವ