ಭಟ್ಕಳ: ದ್ವಿತೀಯ ಪಿಯುಸಿ (second PUC) ಮರುಮೌಲ್ಯಮಾಪನ (revaluation) ಫಲಿತಾಂಶದಲ್ಲಿ ತಾಲೂಕಿನ ವಿದ್ಯಾರ್ಥಿಯೊಬ್ಬರು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಭಟ್ಕಳಕ್ಕೆ (Bhatkal) ಕೀರ್ತಿ ತಂದಿದ್ದಾರೆ (PUC result).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ತಾಲೂಕಿನ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ತೇಜಸ್ ರವಿ ನಾಯ್ಕ ಶೇಕಡಾ ೯೯ ಅಂಕಗಳನ್ನು ಪಡೆದು ರಾಜ್ಯಕ್ಕೆ ೬ನೇ ಸ್ಥಾನ ಪಡೆದಿದ್ದಾರೆ. ಜೊತೆಗೆ ಉತ್ತರ ಕನ್ನಡ (Uttara Kannada) ಜಿಲ್ಲೆಗೆ ೨ನೇ ಸ್ಥಾನ ಹಾಗೂ ಭಟ್ಕಳ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ (PUC result).
hackathon/ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ನಲ್ಲಿ AITM ವಿದ್ಯಾರ್ಥಿಗಳಿಗೆ ಪ್ರಥಮ ಪ್ರಶಸ್ತಿ
ತೇಜಸ್ ಅವರು ಕರಾವಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿರುವ ರವಿ ನಾಯ್ಕ ಅವರ ಪುತ್ರರಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Tenth anniversary/ ಮೇ ೧ರಂದು ಭಟ್ಕಳದಲ್ಲಿ ಕೂಲಿ ಕಾರ್ಮಿಕರ ಸಂಘದ ದಶಮಾನೋತ್ಸವ ಆಚರಣೆ



