ಭಟ್ಕಳ: ಪತ್ರಕರ್ತರು ಯಾರದ್ದೋ ಒತ್ತಡಕ್ಕೆ ಮಣಿಯದೆ ಸಮಾಜದ ಹಿತದೃಷ್ಟಿಯಿಂದ ಪತ್ರಿಕಾ ಧರ್ಮ ಪಾಲಿಸಬೇಕು. ಲೇಖನಿಯ ಸತ್ಯನಿಷ್ಠೆಯಲ್ಲಿ ವ್ಯತ್ಯಾಸವಾದರೆ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರಲಿದೆ ಎಂದು ವಿಚಾರ ಸಂಕಿರಣದಲ್ಲಿ (Symposium) ಬಂಗಾರಮಕ್ಕಿ ಸಂಸ್ಥಾನದ ಶ್ರೀ ಮಾರುತಿ ಗುರೂಜಿ ಎಚ್ಚರಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇಲ್ಲಿನ ಶ್ರೀ ನಾಗಯಕ್ಷ ಧರ್ಮಾರ್ಥ ಸಭಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ಕಾನಿಪ ಧ್ವನಿ) ಸಂಘಟನೆಯ ಭಟ್ಕಳ (Bhatkal) ಘಟಕ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ (Symposium) ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನು ಓದಿ: Lecture/ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ವ– ಡಾ ಚೇತನ್ ಕಲ್ಕೂರ

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಮಾಜ ಸೇವಕ ಗೋವಿಂದ ಪೂಜಾರಿ ಮಾತನಾಡಿ, ಪತ್ರಕರ್ತರ ಕುಟುಂಬಗಳಿಗೆ ನೆರವಾಗಲು ಪ್ರತ್ಯೇಕ ಟ್ರಸ್ಟ್ ಸ್ಥಾಪಿಸುವ ಚಿಂತನೆ ಇದೆ ಎಂದರು. ಹಿರಿಯ ವರದಿಗಾರ ಗಂಗಾಧರ್ ಮೊದಲಿಯರ್ ಮಾತನಾಡಿ, ಪತ್ರಿಕೋದ್ಯಮ ರೂಪಾಂತರವಾಗುತ್ತಿದೆ. ಕಾಲಕಾಲಕ್ಕೆ ತಕ್ಕಂತೆ ಪತ್ರಿಕಾ ಮಾಧ್ಯಮದವರು ತಾಂತ್ರಿಕತೆ ಬೆಳೆದಂತೆ ಮಾಧ್ಯಮದವರು ಹೊಂದಿಕೊಳ್ಳಬೇಕು ಎಂದರು.

ವಿಡಿಯೋ ಸಹಿತ ಇದನ್ನು ಓದಿ: car hits scooter/ ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಓರ್ವ ಸಾವು, ಮತ್ತೊಬ್ಬಗೆ ಗಾಯ; ವಿಡಿಯೋ ವೈರಲ್

ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗಲೆ ಪ್ರಾಸ್ತಾವಿಕವಾಗಿ ಮಾತನಾಡಿ, ಕೇವಲ ಮೂರು ವರ್ಷಗಳಲ್ಲಿ ಸಂಘಟನೆಯು 21 ಜಿಲ್ಲೆಗಳಿಗೆ ವಿಸ್ತರಿಸಿದ್ದು, ಪತ್ರಕರ್ತರ ಮಾಸಾಶನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನು ಓದಿ: Murudeshwar/ ಅಪರಿಚಿತ ಹೆಂಗಸಿನ ಮೃತದೇಹ ಪತ್ತೆ

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ನ್ಯಾಯವಾದಿ ರವಿಕಿರಣ್ ಮುರುಡೇಶ್ವರ, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಶಂಕರ್ ನಾಯ್ಕ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಉಲ್ಲಾಸ ಶಾನಭಾಗ, ಖಜಾಂಚಿ ನಸೀಬ್ ಮುಲ್ಲಾ ಘನಿ, ಕುಮಾರ ನಾಯ್ಕ, ಜಾವಿದ್ ಸಿಂಗೇರಿ ಉಪಸ್ಥಿತರಿದ್ದರು.

ಇದನ್ನು ಓದಿ: Raghaveshwara Sri/ ಧಾರ್ಮಿಕ ಸಭೆಯಲ್ಲಿ ರಾಘವೇಶ್ವರ ಶ್ರೀ ಆಶೀರ್ವಚನ