ಕಾರವಾರ (Karwar): ಕಾರವಾರದ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ನೀಡುವ ೨೦೨೪ರ ರವೀಂದ್ರನಾಥ ಟಾಗೋರ ಪ್ರಶಸ್ತಿಯನ್ನು (Tagore award) ಘೋಷಣೆ ಮಾಡಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಪ್ರಮೋದ ಹರಿಕಾಂತ, ಪಬ್ಲಿಕ್ ಟಿ.ವಿ ಜಿಲ್ಲಾ ವರದಿಗಾರ ನವೀನ ಸಾಗರ, ಸಂಯುಕ್ತ ಕರ್ನಾಟಕ ಜಿಲ್ಲಾ ವರದಿಗಾರ ವಾಸುದೇವ ಗೌಡ, ವಿಸ್ತಾರ ನ್ಯೂಸ್ ವಿಡಿಯೋ ವರದಿಗಾರ ಸಾಯಿಕಿರಣ್ ಬೋಬ್ರೆಕರ್ ಅವರನ್ನು ಟಾಗೋರ್ ಪ್ರಶಸ್ತಿಗೆ (Tagore award) ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ ೧ರಂದು ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ನಡೆಯಲಿದೆ.
ಇದನ್ನೂ ಓದಿ : ಆಗಸ್ಟ್ ೩೦ರಂದು ವಿವಿಧೆಡೆ ಅಡಿಕೆ ಧಾರಣೆ
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ,ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಭಾಗವಹಿಸಲಿದ್ದಾರೆ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ, ಜಿಲ್ಲಾ ಪತ್ರಿಕಾಭವನ ನಿರ್ವಹಣಾ ಸಮಿತಿ ಉಪಾಧ್ಯಕ್ಷ ನಾಗರಾಜ ಹರಪನಹಳ್ಳಿ ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಟಿ.ಬಿ. ಹರಿಕಾಂತ ವಹಿಸಲಿದ್ದಾರೆ.
ವಿಡಿಯೋ ಸಹಿತ ಇದನ್ನೂ ಓದಿ : ಬ್ರಹ್ಮಾನಂದ ಸರಸ್ವತಿ ಶ್ರೀಗಳ ಸೀಮೋಲ್ಲಂಘನ ಯಶಸ್ವಿ