ಹುಬ್ಬಳ್ಳಿ (Hubballi) : ಕ್ಷುಲ್ಲಕ ವಿಚಾರಕ್ಕೆ ಯುವಕನೊರ್ವನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ (Hubballi) ಲಿಂಗರಾಜನಗರ ರಸ್ತೆಯಲ್ಲಿನ ಗೋಲ್ಡನ್ ಹೈಟ್ಸ್ ಬಾರ್’ನ ಪಾರ್ಕಿಂಗ್ ಸ್ಥಳದಲ್ಲಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಆಕಾಶ ವಾಲ್ಮೀಕಿ (24) ಹತ್ಯೆಯಾಗಿರುವ ಯುವಕ. ಸೋಮವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಮೂವರು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ನಂದಗಾವಿ, ವಿದ್ಯಾನಗರದ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ಕೊಲೆಗಾರರ ಬಂಧನಕ್ಕೆ ಕ್ರಮ ಕೈಗೊಂಡಿದ್ದರು.
ಇದನ್ನೂ ಓದಿ : Hubballi/ ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು….. !
ಅದರಂತೆ ಆರೋಪಿಗಳ ಬೆನ್ನು ಬಿದ್ದ ಪೊಲೀಸರ ಮೇಲೆಯೇ MTS ಕಾಲೋನಿ ಬಳಿಯಲ್ಲಿ ಹಲ್ಲೆಗೆ ಮುಂದಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಆನಂದನಗರದ ನಿವಾಸಿ ಅಭಿಷೇಕ ಶಿರೂರ, ವಿನೋದ್ ಅಂಬಿಗೇರ, ಉಲ್ಲಪ್ಪ ಕೋಟಿ ಗುಂಡೇಟು ತಿಂದ ಆರೋಪಿಗಳು. ಅವರನ್ನು ಕಿಮ್ಸ್ ಆಸ್ಪತ್ರೆಗೆ (KIMS Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ : Recreation Club/ ಪೊಲೀಸರ ವಿರುದ್ಧ ಅಸೋಸಿಯೇಶನ್ ಆಕ್ರೋಶ
ಮೇಲ್ನೋಟಕ್ಕೆ ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನಷ್ಟೇ ಪೊಲೀಸರ ತನಿಖೆಯಿಂದ ನಿಖರ ಮಾಹಿತಿ ತಿಳಿದುಬರಬೇಕಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ (Complaint) ದಾಖಲಾಗಿದೆ.
ಇದನ್ನೂ ಓದಿ : Power Outage/ ಕಾರವಾರ, ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ