ಭಟ್ಕಳ: ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಟಿಎಚ್‌ಒ ಡಾ ಸನಾ ನೇತೃತ್ವದ ತಂಡವು ಭಟ್ಕಳ (Bhatkal) ನಗರ ಮತ್ತು ಶಿರಾಲಿಯಲ್ಲಿ ಕಾರ್ಯಾಚರಣೆ ನಡೆಸಿ ೩ ಕ್ಲಿನಿಕ್‌ಗಳನ್ನು ಸೀಜ್ ಮಾಡಿದ್ದಾರೆ (clinics seized).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಟಿಎಚ್‌ಒ ಡಾ ಸನಾ ನೇತೃತ್ವದಲ್ಲಿ ನೋಡಲ್ ಅಧಿಕಾರಿ, ಆಯುಷ್ ಅಧಿಕಾರಿ, ನಗರ ಠಾಣೆಯ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಇತರ ಆರೋಗ್ಯ ಇಲಾಖಾ ಸಿಬ್ಬಂದಿ ನಗರದಲ್ಲಿ ೪ ಹಾಗೂ ಶಿರಾಲಿಯ ಕ್ಲಿನಿಕ್ ಒಂದರ ಮೇಲೆ ದಾಳಿ ನಡೆಸಿ ಪರಿಶೀಲಿಸಿತು. ಆಯಾ ಕ್ಲಿನಿಕ್‌ಗಳ ವೈದ್ಯರು ಹೊಂದಿರುವ ಎಂಬಿಬಿಎಸ್, ಬಿಎಎಂಎಸ್, ಬಿಎಚ್‌ಎಂಎಸ್ ಹಾಗೂ ಯುನಾನಿ ಪದವಿ ಪ್ರಮಾಣಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು.
Bhavagana/ ಬ್ರಹ್ಮ ಕಲಶೋತ್ಸವದಲ್ಲಿ ಭಾವಗಾನದ ನಿನಾದ
ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗಿದೆ. ಒಟ್ಟು ೩ ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದ್ದು (clinics seized), ಮದಿನಾ ಕಾಲನಿಯ ಕ್ಲಿನಿಕ್ ಮಾಲೀಕರು ತಾವೇ ಖುದ್ದಾಗಿ ಬಂದ್ ಮಾಡಿದ್ದು, ಅವರ ಬಾಗಿಲಿಗೆ ನೊಟೀಸ್ ಅಂಟಿಸಲಾಗಿದೆ. ಕ್ಲಿನಿಕ್‌ಗಳ ವಿರುದ್ಧದ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ರವಾನಿಸಲಾಗಿದ್ದು, ಸಮಗ್ರ ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವದು ಎಂದು ಟಿಎಚ್‌ಒ ತಿಳಿಸಿದ್ದಾರೆ.
Case filed/ ಗಾಂಜಾ ಸೇವನೆ: ಮೂವರ ಬಂಧನ
ಭಟ್ಕಳ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಪರಿಶೀಲನಾ ಕಾರ್ಯ ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರು ಅನಧಿಕೃತ ವೈದ್ಯರ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯಬಾರದು. ಸರ್ಕಾರಿ, ಮಾನ್ಯತೆ ಪಡೆದ ನೋಂದಾಯಿತ ವೈದ್ಯರಿಂದ ಮಾತ್ರ ಚಿಕಿತ್ಸೆ ಪಡೆಯಬೇಕೆಂದು ಟಿಎಚ್‌ಒ ಡಾ ಸನಾ ಮನವಿ ಮಾಡಿದರು.



