ಬೆಳಗಾವಿ (Belagavi): ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕು ಬೆನಕನಹೊಳಿ ಬಳಿಯ ಘಟಪ್ರಭಾ ನದಿ ಹಿನ್ನಿರಿನ ಪ್ರದೇಶದಲ್ಲಿ ಮೀನು ಹಿಡಿಯಲು ತೆರಳಿದ್ದ (fishing) ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲಾಗಿರುವ ದುರ್ಘಟನೆ (tragedy) ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ (49)ಮತ್ತು ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ (12) ಮೃತ ಪಟ್ಟವರು. ಲಕ್ಷ್ಮಣ ಹಾಗೂ ಅವರ ಮಕ್ಕಳು ಭಾನುವಾರ ಸಂಜೆ ಬೈಕ್ ನಿಲ್ಲಿಸಿ ಮೀನು ಹಿಡಿಯಲು ನದಿಯ ನೀರಿಗೆ ಇಳಿದಿದ್ದರು. ಸೋಮವಾರ ಬೆಳಗ್ಗೆ ವರೆಗೂ ಮನೆಗೆ ವಾಪಸ್ಸು ಬಾರದೇ ಇರುವುದರಿಂದ ಕುಟುಂಬದವರು ಪೊಲೀಸರಿಗೆ ದೂರು (complaint) ನೀಡಿದ್ದಾರೆ. ಆಗ ದುರ್ಘಟನೆ (tragedy) ನಡೆದಿರುವುದು ಬೆಳಕಿಗೆ ಬಂದಿದೆ. ಎನ್ ಡಿ ಆರ್ ಎಫ್ ತಂಡ ಹಾಗೂ ಯಮಕನಮರಡಿ (Yamaknmardi) ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : ಕಾರವಾರದ ಬಾಲಕಿಗೆ ವಿವಾಹಿತನೊಂದಿಗೆ ಬಾಲ್ಯವಿವಾಹ