ಸಿದ್ದಾಪುರ (Siddapura): ತಾಲೂಕಿನ ನಿಲ್ಕುಂದ ಸಮೀಪದ ವಾಟೆಹೊಳೆ (Vatehole) ಜಲಪಾತದಲ್ಲಿ (Waterfall) ಇಬ್ಬರು ಯುವಕರು ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಶಿರಸಿಯ (Sirsi) ಸುಹಾಸ ಶೆಟ್ಟಿ (೨೨) ಮತ್ತು ಅಕ್ಷಯ ಭಟ್‌ (೨೨) ಮೃತರು. ಇವರು ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ ತಾಲೂಕಿನ ವಾಟೆಹೊಳೆ ಜಲಪಾತಕ್ಕೆ (Waterfall) ಆರು ಜನ ಯುವಕರೊಂದಿಗೆ ತೆರಳಿದ್ದರು. ಈ ಸಂದರ್ಭ ಕಾಲು ಜಾರಿ ಬಿದ್ದ ಇಬ್ಬರೂ ನೀರಿನಲ್ಲಿ ತೇಲಿ ಹೋಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಮುಳುಗು ತಜ್ಞರು ಆಗಮಿಸಿ ಶೋಧಕಾರ್ಯ ನಡೆಸಿ ಶವ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ (Complaint) ದಾಖಲಾಗಿದೆ.

waterfall

 

ಇದನ್ನೂ ಓದಿ : Vader Swamiji/ ಭಟ್ಕಳ ಎಜುಕೇಶನ್ ಟ್ರಸ್ಟಿನ ಮತ್ತೊಂದು ಮೈಲುಗಲ್ಲು