ಭಟ್ಕಳ: ತಾಲೂಕಿನ ಮೂಡ ಶಿರಾಲಿ–ಬೆಂಗ್ರೆ ಭಾಗದಲ್ಲಿ ರೈಲು ಡಿಕ್ಕಿಯಿಂದ (Train collision) ವೃದ್ಧೆಯೊಬ್ಬರು ದುರ್ಮರಣ ಹೊಂದಿದ ಘಟನೆ ನಡೆದಿದೆ. ಮೃತರನ್ನು ಮೂಡ ಶಿರಾಲಿ ನಿವಾಸಿ ಮಾಸ್ತಮ್ಮ ತಿಮಯ್ಯ ನಾಯ್ಕ (62) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ವರ್ಷಗಳಿಂದ ಶ್ರವಣ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಮಾಹಿತಿಯಂತೆ, ಮೇಯಲು ಬಿಟ್ಟಿದ್ದ ಹಸುಗಳನ್ನು ಕರೆದುಕೊಂಡು ಮನೆಗೆ ಮರಳುವ ವೇಳೆ ರೈಲ್ವೆ ಹಳಿಯನ್ನು ದಾಟುತ್ತಿದ್ದಾಗ, ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದ (Train collision) ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

SSLC result/ ಮತ್ತೊಮ್ಮೆ ಶೇ ನೂರರ ಸಾಧನೆ ಮಾಡಿದ ಜಾಲಿಯ ಸರ್ಕಾರಿ ಪ್ರೌಢಶಾಲೆ

ಈ ಕುರಿತು ಮೃತರ ಪುತ್ರ ಮಂಜುನಾಥ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Bike collision/ ಬೈಕ್ ಡಿಕ್ಕಿ: ಹಿಂಬದಿ ಸವಾರಗೆ ಗಾಯ