ಭಟ್ಕಳ (Bhatkal) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (SKDRP) ಜ್ಞಾನವಿಕಾಶ ಕಾರ್ಯಕ್ರಮದಡಿಯಲ್ಲಿ ಭಟ್ಕಳ ತಾಲೂಕಿನ ಮುರ್ಡೇಶ್ವರದ (Murdeshwar) ಜನತಾ ವಿದ್ಯಾಲಯ ಹೈಸ್ಕೂಲಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ (Tution class) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮವನ್ನು ಉತ್ತರ ಕನ್ನಡ (Uttara kannada) ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಸತೀಶ ಶೇಟ ಟ್ಯೂಷನ್ ಕ್ಲಾಸ್ (Tution class) ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಟ್ಕಳ ತಾಲೂಕಿನ ಯೋಜನಾಧಿಕಾರಿ ಗಣೇಶ ನಾಯ್ಕ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಉಷಾ ಭಟ್ ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಎಸ್.ಎಸ್. ಕಾಮತ ಮಾತನಾಡಿ, ಪೂಜ್ಯರ ಸಮಾಜಸೇವೆ, ಶೈಕ್ಷಣಿಕ ಕಾಳಜಿ ಮಾದರಿಯಾಗಿದೆ ಎಂದರು. ಶಿಕ್ಷಕ ಮಹೇಶ ಸ್ವಾಗತಿಸಿದರು, ಶಿಕ್ಷಕಿ ಆಶಾ ವಂದಿಸಿದರು. ಮೇಲ್ವಿಚಾರಕ ಗಣೇಶ ಕಾರ್ಯಕ್ರಮ ನಿರೂಪಿಸಿದರು.
ಇದನ್ನೂ ಓದಿ : ನಾಗಬನದಲ್ಲಿ ವಿಜೃಂಭಣೆಯ ದೀಪೋತ್ಸವ